ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಿರಿಗೆರೆಯ ಮಲೇಶಂಕರದ ಶ್ರೀ ಮಲೇಶಂಕರ ದೇವಸ್ಥಾನದ ಶ್ರೀ ಸ್ವಾಮಿಯ ಮಹಾರಥೋತ್ಸವ ಏ.14ರಿಂದ 16ರ ವರೆಗೆ ಜರುಗಲಿದೆ.
ಏ.14ರ ಬೆಳಿಗ್ಗೆಯಿಂದ ಶ್ರೀ ಗಣಪತಿ ಪೂಜೆ, ಪುಣ್ಯಾಹ, ನಂದಿಧ್ವಜಾರೋಹಣ, ರಾತ್ರಿ ಯಾಗಶಾಲಾ ಪ್ರವೇಶ, ಅಂಕುರಾರ್ಪಣೆ, ಕಂಕಣ ಬಂಧನ, ಬೇರಿತಾಡನ ಹಾಗೂ ಬಲಿ ಆರಂಭೋತ್ಸವ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಿ. ಹನುಮಂತಪ್ಪ ಇಂದು ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಏ.15ರ ಬೆಳಿಗ್ಗೆ 9.30ರಿಂದ 10.30ರವರೆಗೆ ಕಲಾತತ್ವ ಹವನ ಹಾಗೂ ಮಧ್ಯಾಹ್ನ 12.30ಕ್ಕೆ ಮಹಾರಥೋತ್ಸವ ನಡೆಯಲಿದೆ. ಏ.16ರಂದು ಬಲಿ ಚೂರ್ಣೋತ್ಸವ, ಅವಭೃತ ಸ್ನಾನ, ಓಕಳಿ, ಸಂಧಾನ ಹಾಗೂ ಪೂರ್ಣಾಹುತಿ ನಡೆಯಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ವೇದಬ್ರಹ್ಮ ಶೀಧರ್ ಭಟ್ ಅವರ ಪೌರೋಹಿತ್ಯದಲ್ಲಿ ನೆರವೇರಲಿದೆ ಎಂದರು.
ಭಕ್ತಾದಿಗಳ ಎಲ್ಲಾ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತನು ಮನ ಧನ ಸಹಕಾರ ನೀಡಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪ್ರಮುಖರಾದ ಸದಾಶಿವ, ಹೆಚ್.ಡಿ. ಶಿವಪ್ಪ, ಶಿವರುದ್ರಪ್ಪ, ಹನುಮಂತಪ್ಪ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post