No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸ್ಮಾರ್ಟ್‍ಕ್ಲಾಸ್ ರೂಂ ಆರಂಭ

ಟ್ಯಾಬ್, ಪಿಸಿ ವಿತರಣೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಭದ್ರ ಬುನಾದಿ: ಸಂಸದ ರಾಘವೇಂದ್ರ

kalpa News by kalpa News
June 23, 2021
in ಶಿವಮೊಗ್ಗ
0
ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸ್ಮಾರ್ಟ್‍ಕ್ಲಾಸ್ ರೂಂ ಆರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸ್ಮಾರ್ಟ್‍ಕ್ಲಾಸ್ ರೂಂ ಆರಂಭ ಮತ್ತು ಟ್ಯಾಬ್ ಪಿ.ಸಿ ವಿತರಣೆ ಮಾಡುತ್ತಿರುವುದು ವಿದ್ಯಾರ್ಥಿಗಳ ಕಲಿಕೆಗೆ ಅತ್ಯಂತ ಅನುಕೂಲವಾಗಲಿದೆ ಹಾಗೂ ಇದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಭದ್ರ ಬುನಾದಿಯಾಗುವಂತಹ ಹೆಜ್ಜೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಆಂತರಿಕ ಗುಣಮಟ್ಟ ಭರವಸಾ ಕೋಶ, ಶಿವಮೊಗ್ಗ ಇವರ ಸಹಯೋಗದೊಂದಿಗೆ ಇಂದು ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಸ್ಮಾರ್ಟ್ ಕಾಸ್‍ರೂಂ ಉದ್ಘಾಟನೆ ಹಾಗೂ ಟ್ಯಾಬ್ ಪಿ.ಸಿ. ವಿತರಣಾ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ಟ್ಯಾಬ್ ಪಿ.ಸಿ ವಿತರಣೆ ಮಾಡಿ ಅವರು ಮಾತನಾಡಿದರು.

ಸುಮಾರು ರೂ.163 ಕೋಟಿ ವೆಚ್ಚದಲ್ಲಿ 436 ಪ್ರಥಮ ದರ್ಜೆ ಕಾಲೇಜುಗಳು, 14 ಇಂಜಿನಿಯರಿಂಗ್ ಕಾಲೇಜುಗಳು, 82 ಪಾಲಿಟೆಕ್ನಿಕ್ ಸೇರಿದಂತೆ 550 ಸಂಸ್ಥೆಗಳಲ್ಲಿ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ಪಿ.ಸಿ ವಿತರಣೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸ್ಮಾರ್ಟ್‍ಕ್ಲಾಸ್ ರೂಂಗಳಿಗೆ  ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರು ಇಂದು ವರ್ಚುಯಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡುತ್ತಿರುವುದು ಅಭಿನಂದನಾರ್ಹವಾಗಿದೆ ಎಂದರು.

ಹಿಂದಿನ ಸರ್ಕಾರ ಎಸ್.ಸಿ.ಎಸ್.ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ನೀಡುವ ಯೋಜನೆ ಹಮ್ಮಿಕೊಂಡಿತ್ತು. ಆದರೆ ಎಲ್ಲ ವಿದ್ಯಾರ್ಥಿಗಳಿಗೆ ಇಂತಹ ತಂತ್ರಜ್ಞಾನ ಅವಶ್ಯಕತೆ ಇರುವ ಹಿನ್ನೆಲೆ ಪ್ರಸ್ತುತ ಸರ್ಕಾರ ಅದೇ ಬಜೆಟ್‍ನಲ್ಲಿ ಪದವಿಯ ಪ್ರಥಮ ವರ್ಷದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಟ್ಯಾಬ್ ಪಿ.ಸಿ. ವಿತರಣೆ ಮಾಡುತ್ತಿರುವುದು ಸ್ತುತ್ಯಾರ್ಹವಾಗಿದೆ ಎಂದರು.
ವಿದ್ಯಾರ್ಥಿಗಳಿಗೆ ಟ್ಯಾಬ್ ಸಹಾಯದಿಂದ ಆನ್‍ಲೈನ್ ತರಗತಿಗಳು ಹಾಗೂ ಪಿಪಿಟಿ, ಇಮೇಜಸ್, ಆಡಿಯೋ ಇತರೆ ಆಧುನಿತ ತಂತ್ರಜ್ಞಾನದಿಂದ ಕಲಿಕೆ ಸುಲಭವಾಗಲಿದ್ದು, ಶೈಕ್ಷಣಿಕ ಉನ್ನತೀಕರಣಕ್ಕೆ ಅನುಕೂಲವಾಗಲಿದೆ. ಹಾಗೂ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಭದ್ರ ಬುನಾದಿ ಹಾಕಲು ಇದು ಮೊದಲ ಹೆಜ್ಜೆಯಾಗಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗಾಗಿ ಹಲವಾರು ಚಿಂತನೆಗಳನ್ನು ಮಾಡುತ್ತಾ ಅಪ್‍ಡೇಟ್ ಮಾಡುತ್ತಾ ಬಂದಿದೆ. ಹಿಂದಿನ ಶಿಕ್ಷಣಕ್ಕಿಂತ ಇಂದು ಭಿನ್ನವಾಗಿದ್ದು ಅಪ್‍ಡೇಟ್ ಆಗುವುದು ಅನಿವಾರ್ಯ. ಈ ನಿಟ್ಟಿನಲ್ಲಿ ಇಂತಹ ಯೋಜನೆಗಳು ಒಂದು ಸುಯೋಗ ಎನ್ನಬಹುದು. ಶಿಕ್ಷಣ, ಮೂಲಭೂತ ಸೌಕರ್ಯಗಳು, ಕೈಗಾರಿಕೆ, ಉತ್ತಮ ರಸ್ತೆ, ಏರ್‍ಪೋರ್ಟ್ ಸೇರಿದಂತೆ ಅಭಿವೃದ್ದಿ ಕಾರ್ಯಗಳನ್ನು ಅನುಷ್ಟಾನಗೊಳಿಸುವ ಮೂಲಕ ಇನ್ನು ಎರಡು ಮೂರು ವರ್ಷಗಳಲ್ಲಿ ಶಿವಮೊಗ್ಗ ಮಾದರಿ ಜಿಲ್ಲೆಯಾಗಲಿದೆ ಎಂಬ ನಂಬಿಕೆ ಇದೆ ಎಂದ ಅವರು ಶಿಕ್ಷಣ ಸೇರಿದಂತೆ ಎಲ್ಲ ರೀತಿಯ ಅಭಿವೃದ್ದಿಗಾಗಿ ಸರ್ಕಾರ ಸದಾ ನಿಮ್ಮ ಜೊತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿದ್ಯಾರ್ಥಿ ಪ್ರತಿನಿಧಿ ಹಾಗೂ ಫಲಾನುಭವಿ ಸಿಂಚನಾ ಸಾಗರ್ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವಿದ್ಯಾರ್ಥಿಗಳಿಗೆ ಕೊರೋನಾದಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಟ್ಯಾಬ್.ಪಿ.ಸಿ ಯಿಂದ ಕಲಿಕೆಗೆ ಅನುಕೂಲವಾಗಲಿದೆ. ಸರ್ಕಾದ ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ನಾವು ಕೂಡ ನಮ್ಮ ನಾಡಿಗೆ ಉತ್ತಮ ಕೊಡುಗೆ ನೀಡುತ್ತೇವೆ ಎಂದು ಹೇಳಿದರು.

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಕಾಲೇಜು ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಡಿ.ಎಸ್.ಅರುಣ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯಾದ್ಯಂತ ಮೊದಲನೇ ವರ್ಷದ ಪದವಿ ಓದುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್.ಪಿ.ಸಿ ನೀಡುವ ಹಾಗು ಸ್ಮಾಟ್‍ಕ್ಲಾಸ್ ರೂಂ ಸ್ಥಾಪಿಸುವ ಕಾರ್ಯಕ್ರಮಕ್ಕೆ ಇಂದು ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, ಒಟ್ಟು 1.55 ವಿದ್ಯಾರ್ಥಿಗಳಿಗೆ ಟ್ಯಾಬ್.ಪಿ.ಸಿ ನೀಡಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ 872 ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದು, ಕೊರೊನಾ ಹಿನ್ನೆಲೆ ಇಂದು ಸಾಂಕೇತಿಕವಾಗಿ 12 ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ. ಸರ್ಕಾರದ ಇಂತಹ ಸೌಲಭ್ಯಗಳನ್ನು ಪಡೆದ ನಮ್ಮ ಕಾಲೇಜು ಪ್ರತಿಷ್ಟಿತ ಕಾಲೇಜಾಗಿ ಬೆಳವಣಿಗೆ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಧನಂಜಯ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಹಬ್ಬದ ವಾತಾವರಣ ಏರ್ಪಟ್ಟಿದ್ದು ಇಂತಹ ಸೌಲಭ್ಯ ದೊರೆತಿರುವುದು ನಮ್ಮೆಲ್ಲರ ಸೌಭಾಗ್ಯ. ಈ ಯೋಜನೆಯ ಸದುಪಯೋಗ ಪಡೆದು ಶೈಕ್ಷಣಿಕ ಉನ್ನತೀಕರಣದೆಡೆ ಹೆಜ್ಜೆ ಹಾಕಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಸ್ಮಾರ್ಟ್‍ಕ್ಲಾಸ್ ರೂಂ ಉದ್ಘಾಟನೆ :
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರು ಹಾಗೂ ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷರಾದ ಕೆ.ಎಸ್.ಈಶ್ವರಪ್ಪ ಇವರು ಸ್ಮಾರ್ಟ್ ಕ್ಲಾಸ್ ರೂಂ ಉದ್ಘಾಟನೆ ನೆರವೇರಿಸಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಶೈಕ್ಷಣಿಕ ಕೊಡುಗೆ ನೀಡಬೇಕೆಂದರು.

ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡ, ಪ್ರಸನ್ನಕುಮಾರ್.ಆರ್, ಮಹಾಪೌರರಾದ ಸುನೀತಾ ಅಣ್ಣಪ್ಪ, ಸದಸ್ಯರಾದ ಸುರೇಖಾ ಮುರಳೀಧರ, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಧನಂಜಯ ಬಿ.ಆರ್, ಮಹಿಳಾ ಕಾಲೇಜಿನ ಪ್ರಾಂಶುಪಾಲ ದುಗ್ಗಪ್ಪ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DS ArunKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaMP RaghavendraNews in KannadaNews KannadaShimogaShivamoggaShivamogga NewsSmart Class Roomಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಕೆ.ಎಸ್.ಈಶ್ವರಪ್ಪಸಂಸದ ಬಿ.ವೈ. ರಾಘವೇಂದ್ರಸ್ಮಾರ್ಟ್‍ಕ್ಲಾಸ್ ರೂಂ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಾಡಿಕೆಗಿಂತ ಹೆಚ್ಚಿನ ಮಳೆ: ರೈತರಲ್ಲಿ ಮಂದಹಾಸ ಮೂಡಿಸಿದೆ: ಸಚಿವ ಈಶ್ವರಪ್ಪ

Next Post

ಸುರಕ್ಷಿತ ವಾತಾವರಣದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್

kalpa News

kalpa News

Next Post
ಮುಖ್ಯಮಂತ್ರಿಗಳೇ, ಚಾಮರಾಜನಗರವೂ ನಿಮ್ಮ ಆಡಳತದ ವ್ಯಾಪ್ತಿಯಲ್ಲಿದೆ ಎಂಬುದು ನೆನಪಿದೆಯೇ?

ಸುರಕ್ಷಿತ ವಾತಾವರಣದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL