ಕಲ್ಪ ಮೀಡಿಯಾ ಹೌಸ್ | ಆನಂದಪುರ |
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡ ಬಂದ ಹಾವನ್ನು (Snake) ತಪ್ಪಿಸಲು ಹೋಗಿ ಕಾರು ನಿಯಂತ್ರಣ ಕಳೆದುಕೊಂಡು ಚರಂಡಿಗೆ ಪಲ್ಟಿಯಾದ ಘಟನೆ (Shivamogga) ಶಿವಮೊಗ್ಗ ಜಿಲ್ಲೆಯ ಆನಂದಪುರಂ ಬಳಿಯ ಸಿದ್ದೇಶ್ವರ ಕಾಲೋನಿ ಬಳಿ ನಡೆದಿದೆ.
ಹಾವನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಕಾರು
ಮಂಗಳೂರು ಮೂಲದ ದಂಪತಿ ತಮ್ಮ ಮಗುವಿನೊಂದಿಗೆ ಕಾರಿನಲ್ಲಿ ಸಾಗರದಿಂದ ಆನಂದಪುರದ ಕಡೆಗೆ ಪ್ರಯಾಣಿಸುತ್ತಿದ್ದರು. ಸಿದ್ದೇಶ್ವರ ಕಾಲೋನಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಾಏಕಿ ಹಾವು ಅಡ್ಡವಾಗಿ ಬಂದಿದ್ದು, ಅದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ ವೇಳೆ ಕಾರು ನಿಯಂತ್ರಣ ಕಳೆದುಕೊಂಡಿದೆ.
ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿದೆ. ಘಟನೆಯಿಂದ ಕಾರಿನಲ್ಲಿದ್ದ ದಂಪತಿ ಹಾಗೂ ಮಗುವಿಗೆ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಸ್ಥಳೀಯರಿಂದ ತಕ್ಷಣ ರಕ್ಷಣೆ
ಕಾರು ಪಲ್ಟಿಯಾದ ತಕ್ಷಣ ಸ್ಥಳೀಯ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದ ಮೂವರನ್ನೂ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಘಟನೆಯಲ್ಲಿ ದಂಪತಿ ಹಾಗೂ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Also Read>> ಶಿವಮೊಗ್ಗದಲ್ಲಿ ‘ವಿಕಸಿತ ಭಾರತಕ್ಕಾಗಿ ಸೈಕಲ್ ಜಾಥಾ’
Shivamogga : ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತದಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











