ಕಲ್ಪ ಮೀಡಿಯಾ ಹೌಸ್ | ಸಾಗರ |
ತಂದೆಯನ್ನೇ ಮಗ ಕೊಲೆ (Murder) ಮಾಡಿ, ಮೃತದೇಹವನ್ನು ಚಿಕ್ಕಪ್ಪನ ಜಮೀನಿನಲ್ಲಿರುವ ಬಾವಿಗೆ ಎಸೆದಿರುವ ಘಟನೆ (Shivamogga) ಶಿವಮೊಗ್ಗ ಜಿಲ್ಲೆಯ ಸಾಗರ (Sagara) ತಾಲೂಕಿನ ತುಮರಿ ಸಮೀಪದ ಗೊರಗೋಡಿನಲ್ಲಿ ನಡೆದಿದೆ.
ಮೃತರನ್ನು ಗೊರಗೋಡಿನ ಸುಬ್ರಾಯ (55) ಎಂದು ಗುರುತಿಸಲಾಗಿದ್ದು, ಅವರ ಪುತ್ರ ಜಯಂತ್ ಹತ್ಯೆ ಆರೋಪಿಯಾಗಿದ್ದಾನೆ. ಮಂಗಳವಾರ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಗಲ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Also Read>> ಯಕ್ಷಗಾನ-ಸುಗಮ ಸಂಗೀತದ ಅಪೂರ್ವ ಸಂಗಮ: ಆ.15ರಂದು ‘ಯಕ್ಷ-ಭಾವ-ಗಾನ’ ಜುಗಲ್ಬಂದಿ
ಪೊಲೀಸರ ವಿಚಾರಣೆ ವೇಳೆ ಜಯಂತ್, ತಂದೆಯೊಂದಿಗೆ ಜಗಳವಾದ ಸಂದರ್ಭದಲ್ಲಿ ಕತ್ತಿ ಹಾಗೂ ಕೋಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಗಿ, ಬಳಿಕ ಮೃತದೇಹವನ್ನು ಚಿಕ್ಕಪ್ಪನ ಗದ್ದೆಯಲ್ಲಿರುವ ಬಾವಿಗೆ ಎಸೆದಿದ್ದಾಗಿ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.
14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಮೃತ
ಮೃತ ಸುಬ್ರಾಯ 2010ರಲ್ಲಿ ತನ್ನ ತಂದೆ ಹಾಗೂ ತಂಗಿಯನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಸುಮಾರು 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದನು. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆತ, ಇತ್ತೀಚೆಗೆ ಮೇ ತಿಂಗಳಲ್ಲಿ ಜೈಲಿನಿಂದ ಬಿಡುಗಡೆಯಾಗಿ ಮನೆಗೆ ವಾಪಸ್ ಬಂದಿದ್ದ ಎನ್ನಲಾಗಿದೆ.
ಜೈಲಿನಿಂದ ಬಿಡುಗಡೆಯಾದ ಬಳಿಕ ಊರಿಗೆ ಬಾರದೆ ಬೇರೆಡೆ ನೆಲೆಸಿದ್ದ ಸುಬ್ರಾಯ, ಘಟನೆಗೂ ಐದು ದಿನಗಳ ಹಿಂದಷ್ಟೇ ಗೊರಗೋಡಿಗೆ ಮರಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Shivamogga ಎಸ್ಪಿ ಸ್ಥಳಕ್ಕೆ ಭೇಟಿ
ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ತನಿಖಾಧಿಕಾರಿಗಳೊಂದಿಗೆ ಚರ್ಚಿಸಿ, ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಪ್ರಕರಣದ ಕುರಿತು ಕಾರ್ಗಲ್ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









