ಕಲ್ಪ ಮೀಡಿಯಾ ಹೌಸ್
ಸೊರಬ: ಹಾಡಹಗಲೇ ನಡು ರಸ್ತೆಯಲ್ಲಿ ತನ್ನ ಪತ್ನಿಯನ್ನೇ ಇರಿದು ಕೊಲ್ಲಲು ಪತಿ ಯತ್ನಿಸಿರುವ ಘಟನೆ ಹಳೇ ಸೊರಬದಲ್ಲಿ ಇಂದು ನಡೆದಿದೆ.
ಪತ್ನಿಯು ಅನೈತಿಕ ಸಂಬಂಧ ಹೊಂದಿದ್ದೇ ಪತಿಯ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.
ಮಹಿಳೆ ಆಟೋದಲ್ಲಿ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ ಪತಿ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ರಕ್ತದ ಮಡುವಿನಲ್ಲಿ ಬಿದ್ದು ನರಳುತ್ತಿದ್ದ ಆಕೆಯನ್ನು ಸರ್ಕಾರ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಹೆಚ್ಚಿನ ಚಿಕಿತ್ಸೆಗೆ ವೈದ್ಯರು ತಿಳಿಸಿದ ಹಿನ್ನೆಲೆಯಲ್ಲಿ ಆಕೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹತ್ಯೆ ಯತ್ನ ನಡೆಸಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















