ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯ ಆರಂಭಕ್ಕೂ ಮುನ್ನ ಪಟ್ಟಣದ ನೂರಾರು ವರ್ಷಗಳ ಇತಿಹಾಸವಿರುವ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಸಂಸದ ರಾಘವೇಂದ್ರ ದಂಪತಿ #B Y Raghavendra ಸಮೇತ ಹಾಗೂ ಕಾರ್ಯಕರ್ತರೊಂದಿಗೆ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಜಿಲ್ಲೆಯ ಪ್ರಗತಿಗಾಗಿ ಇನ್ನು ಹೆಚ್ಚಿನ ಮಟ್ಟದಲ್ಲಿ ಕಾರ್ಯ ನಿರ್ವಹಿಸಲು ಶಕ್ತಿ ಕೊಡುವಂತೆ ಹಾಗೂ ದೇಶದ ಒಳಿತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಲ ನೀಡುವಂತೆ ಮತ್ತು ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲ ದೂರ ಮಾಡುವಂತೆ ತಾಯಿಯಲ್ಲಿ ಭಕ್ತಿಯಿಂದ ಪ್ರಾರ್ಥಿಸಲಾಯಿತು.
Also read: ಮಾ.31ರಂದು ಬಿಜೆಪಿ ಪಕ್ಷದ ಪೇಜ್ ಕಾರ್ಯಕರ್ತರ ಸಮಾವೇಶ: ಶಾಸಕ ಚನ್ನಬಸಪ್ಪ
ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಪ್ರಕಾಶ್, ಮುಖಂಡರಾದ ರಾಜು ತಲ್ಲೂರು, ಜ್ಞಾನೇಶ್ವರ್, ರಾಜಪ್ಪ, ಗಾಯತ್ರಿ ಮಲ್ಲಪ್ಪ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















