ಕಲ್ಪ ಮೀಡಿಯಾ ಹೌಸ್
ಸೊರಬ: ಕೊರೋನಾ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜಾರಿಯಾದ ಕೊರೋನಾ ಕರ್ಫ್ಯೂ ನಿಯಮ ಉಲ್ಲಂಘಿಸಿ ವ್ಯಾಪಾರ – ವಹಿವಾಟಿನಲ್ಲಿ ತೊಡಗಿದ್ದ ಮೆಟಲ್ ಸ್ಟೋರ್ ಮಾಲೀಕನ ವಿರುದ್ಧ ಶನಿವಾರ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆನವಟ್ಟಿಯ ದಾನಮ್ಮನ ಬಡಾವಣೆ ನಿವಾಸಿ ಬಾಬುಜಾನ್ ರಾಜಾಸಾಬ್, ಕೊರೋನಾ ಹರಡುವಿಕೆ ತಡಗಟ್ಟಲು ಜಾರಿಯಾಗದ್ದ ಲಾಕ್ ಡೌನ್ ನಿಯಮ ಉಲ್ಲಂಘಿಸಿ ವ್ಯಾಪಾರದಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಮೇರೆಗೆ ಸಿಪಿಐ ಆರ್.ಡಿ. ಮರುಳಸಿದ್ದಪ್ಪ ಮಾರ್ಗದರ್ಶನಲ್ಲಿ ಪಿಎಸ್ಐ ಪ್ರವೀಣ್ ಕುಮಾರ್ ವಾಲೀಕರ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿತನ ವಿರುದ್ದ ದೂರು ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















