No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Thursday, August 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಕುಮಾರ್ ಬಂಗಾರಪ್ಪ ಬಳಿ `ಪ್ಲಾನ್ ಬಿ’ ಸಿದ್ದವಾಗಿದೆಯಾ? ಬಿಜೆಪಿ ಮುಖಂಡ ಜ್ಞಾನೇಶ್ ವಾಗ್ದಾಳಿ

ಸೊರಬ | ಅಂತಃಕಲಹ ಸರಿಪಡಿಸದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯ ಆತಂಕ

kalpa News by kalpa News
December 7, 2023
in ಸೊರಬ
0
ಕುಮಾರ್ ಬಂಗಾರಪ್ಪ ಬಳಿ `ಪ್ಲಾನ್ ಬಿ’ ಸಿದ್ದವಾಗಿದೆಯಾ? ಬಿಜೆಪಿ ಮುಖಂಡ ಜ್ಞಾನೇಶ್ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ವಿಧಾನಸಭಾ ಚುನಾವಣೆಯ ನಂತರ ಪಕ್ಷದ ಚಟುವಟಿಕೆಗಳೊಂದಿಗೆ ಅಂತರ ಕಾಯ್ದುಕೊಂಡಿರುವ ಮಾಜಿ ಶಾಸಕ ಕುಮಾರ್ ಬಂಗಾರಪ್ಪ #KumarBangarappa ಅವರ ನಡೆಯಿಂದ ಕ್ಷೇತ್ರದಲ್ಲಿ ಬಿಜೆಪಿಗೆ #BJP ಧಕ್ಕೆಯಾಗುತ್ತಿದೆ ಎಂದು ಪಕ್ಷದ ಮುಖಂಡ ಜ್ಞಾನೇಶ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಸೊರಬದಲ್ಲಿ #Soraba ಬಿಜೆಪಿ ಬಗ್ಗೆ ಜನರ ಮನಸ್ಸಿನಲ್ಲಿ ಇದ್ದ ಸ್ಥಾನಕ್ಕೆ ಧಕ್ಕೆಯಾಗುತ್ತಿದೆ. ಕುಮಾರ್ ಬಂಗಾರಪ್ಪ ಅವರ ನಡೆಯಿಂದ ಕಾರ್ಯಕರ್ತನ ಮನಸ್ಸಿನಲ್ಲಿ ನೋವು ಮಡುಗಟ್ಟಿದೆ. ಕ್ಷೇತ್ರದಲ್ಲಿ ಪಕ್ಷ ನಾವಿಕನಿಲ್ಲದ ದೋಣಿಯಂತಾಗಿದೆ ಎಂದರು.
ಕಳೆದ ಚುನವಣೆಯಲ್ಲಿ ನಮ್ಮ ಪಕ್ಷಕ್ಕೆ 54 ಸಾವಿರ ಮತ ಬಂದಿರುವುದು ವ್ಯಕ್ತಿಯಿಂದಲ್ಲ. ಬದಲಾಗಿ ಪಕ್ಷವನ್ನು ನೋಡಿ ಜನರು ಬೆಂಬಲಿಸಿದ್ದಾರೆ. ಹೀಗಾಗಿ, 54 ಸಾವಿರ ಮಂದಿ ಚಲಾಯಿಸಿದ್ದ ಮತದ ಋಣಕ್ಕಾಗಿ ನಾವು ಅವರ ಕಷ್ಟ, ನೋವುಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯವಾಗಿದೆ. ಇಂತಹ ಸಂದರ್ಭದಲ್ಲಿ ಕುಮಾರ್ ಬಂಗಾರಪ್ಪ ಎಷ್ಟು ಬಾರಿ ಜನರು ಹಾಗೂ ಕಾರ್ಯಕರ್ತರ ಕಷ್ಟ ಕೇಳಿದ್ದಾರೆ? ಎಷ್ಟು ಸ್ಪಂದಿಸಿದ್ದಾರೆ ಎಂದು ಖಾರವಾಗಿ ಪ್ರಶ್ನಿಸಿದರು.

ಕಾರ್ಯಕರ್ತರು ಅವರ ನಾಯಕತ್ವದ ಮೇಲೆ ಇಟ್ಟುಕೊಂಡ ನಂಬಿಕೆ ಹುಸಿಯಾಗಿದೆ. ಅಧಿಕಾರವಿದ್ದಾಗ ಕಾರ್ಯಕರ್ತರನ್ನು ದೂರವಿಟ್ಟು ದುರಾಡಳಿತ ವರ್ತನೆ ತೋರಿ ಕ್ಷೇತ್ರದ ಕಡೆ ಮುಖ ಮಾಡುತ್ತಿಲ್ಲ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು, ಮುಖಂಡರು ಸಮಸ್ಯೆಯಲ್ಲಿದ್ದಾಗ ಸೌಜನ್ಯಕ್ಕೂ ಭೇಟಿ ಮಾಡಿ ಅವರ ಸುಖ, ಕಷ್ಟ ಆಲಿಸದೆ ಬೆಂಗಳೂರಿನಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ಕಿಡಿ ಕಾರಿದರು.
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿ ದೇಶದಾದ್ಯಂತ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸುತ್ತಿದ್ದರೆ ಕುಮಾರ್ ಬಂಗಾರಪ್ಪ ಯಾವುದೇ ಖುಷಿ ವ್ಯಕ್ತಪಡಿಸಿಲ್ಲ. ಬಿ.ವೈ. ವಿಜಯೇಂದ್ರ #BYVijayedndra ಅವರು ರಾಜ್ಯ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದರೂ ಸೌಜನ್ಯಕ್ಕೂ ಅಭಿನಂದನೆ ತಿಳಿಸದೆ ಇರುವುದು ಅವರ ಸಣ್ಣತನ ತೋರಿಸುತ್ತದೆ ಎಂದು ಟೀಕಿಸಿದರು.

ಕ್ಷೇತ್ರದ ಸಮಸ್ಯೆ ಬಗ್ಗೆ ಮುಖಂಡರು ದೂರವಾಣಿ ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ. ಯಾವುದಕ್ಕೂ ಸ್ಪಂದಿಸದ ಕುಮಾರ್ ಬಂಗಾರಪ್ಪ ಅವರ ಭಾವಚಿತ್ರವನ್ನು ಪಕ್ಷದ ಬ್ಯಾನರ್’ಗಳಲ್ಲಿ ಹಾಕುವ ಅವಶ್ಯಕತೆ ಏನಿದೆ. ಕುಮಾರ್ ಬಂಗಾರಪ್ಪ ಅವರು ಪಕ್ಷಕ್ಕೆ ಅಷ್ಟು ಅನಿವಾರ್ಯವೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.
Kalahamsa Infotech private limitedಪಕ್ಷದ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಳ್ಳುವ ಕುಮಾರ್ ಬಂಗಾರಪ್ಪ ಅವರು ಖಾಸಗಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಾರೆ. ಇವರ ನಡೆಗಳು ಅವರ ಬಳಿ `ಪ್ಲಾನ್ ಬಿ’ #PlanB ಏನಾದರೂ ಸಿದ್ದವಾಗಿದೆಯೇ ಎಂಬ ಅನುಮಾನಗಳನ್ನು ಸಾಮಾನ್ಯ ಕಾರ್ಯಕರ್ತನಲ್ಲಿ ಹುಟ್ಟುಹಾಕಿದೆ ಎಂದು ಕಿಡಿ ಕಾರಿದ್ದಾರೆ.

ಇಂತಹ ವರ್ತನೆಗಳಿಂದಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸೊರಬದಲ್ಲಿ ಹಿನ್ನಡೆಯಾಗಿ ಕ್ಷೇತ್ರವನ್ನು ಕಳೆದುಕೊಳ್ಳಬೇಕಾಯಿತು. ಇದರ ಬೆನ್ನಲ್ಲೇ ಕೆಲವೇ ತಿಂಗಳುಗಳಲ್ಲಿ ಲೋಕಸಭಾ ಚುನಾವಣೆ ಎದುರಾಗಲಿದೆ. ಇಂತಹ ಸಂದರ್ಭದಲ್ಲಿ ಪಕ್ಷದಲ್ಲಿನ ಇಂತಹ ಅಂತಃಕಲಹಗಳು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೊರಬದಲ್ಲಿ ದೊಡ್ಡ ಪೆಟ್ಟು ಕೊಡುವುದು ನಿಶ್ಚಿತ. ಹೀಗಾಗಿ, ಪಕ್ಷದ ಹಿರಿಯರು, ರಾಜ್ಯಾಧ್ಯಕ್ಷರು ಮಧ್ಯಪ್ರವೇಶಿಸಿ, ಪರಿಸ್ಥಿತಿಯನ್ನು ಸರಿಪಡಿಸಿ, ಲೋಕಸಭಾ ಚುನಾವಣೆಯ ಹಾಗೂ ಜನರ ಕಷ್ಟಕ್ಕೆ ಸ್ಪಂದಿಸಲು ಪಕ್ಷ ಸಂಘಟನೆಗೆ ಹಾದಿ ಸುಗಮ ಮಾಡಿಕೊಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಸುರೇಂದ್ರ ಮಾವಲಿ, ಶಿವಾನಂದ ಇದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BJPKannada News WebsiteKumar BangarappaLatest News KannadaMalnad NewsPlanPolitical NewsSorabaಕುಮಾರ್ ಬಂಗಾರಪ್ಪಬಿಜೆಪಿಲೋಕಸಭಾ ಚುನಾವಣೆ 2024ವಿಧಾನಸಭಾ ಚುನಾವಣೆಸೊರಬ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀನಿವಾಸನ ಕರುಣಾ ದೃಷ್ಟಿ ಅರಿತು ಬದುಕಿ: ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ

Next Post

ಶಿವಮೊಗ್ಗ | ವಿದ್ಯಾನಗರ ಫ್ಲೈಓವರ್ ಉದ್ಘಾಟನೆ ಕುರಿತು ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ

kalpa News

kalpa News

Next Post
ನಿಗದಿಗಿಂತಲೂ ಆರು ತಿಂಗಳು ಮುನ್ನವೇ ಮುಕ್ತಾಯದ ಹಂತಕ್ಕೆ ವಿದ್ಯಾನಗರ ಫ್ಲೈಓವರ್ ಕಾಮಗಾರಿ

ಶಿವಮೊಗ್ಗ | ವಿದ್ಯಾನಗರ ಫ್ಲೈಓವರ್ ಉದ್ಘಾಟನೆ ಕುರಿತು ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL