ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಸೊರಬ |
ಈ ಬಾರಿಯ ವಿಧಾನಸಭಾ ಚುನಾವಣೆಗೆ ಸಾರ್ವತ್ರಿಕ ಮತದಾನ ಪ್ರಕ್ರಿಯೆ ಮೇ 10ರಂದು ನಡೆಯಲಿದ್ದು, ಇದಕ್ಕೂ ಮುನ್ನ ವಿಶೇಷ ಮತದಾನ ಪ್ರಕ್ರಿಯೆ ಇಂದಿನಿಂದ ಆರಂಭಗೊಂಡಿದೆ.
ಹೌದು. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಚುನಾವಣಾ ಆಯೋಗ ನೀಡಿದೆ. ಇದಕ್ಕಾಗಿ ಇಂತಹ ಅರ್ಹ ಮತದಾರರನ್ನು ಗುರುತಿಸಿ ಪಟ್ಟಿ ಮಾಡಿತ್ತು.
ಯಾರು, ಎಲ್ಲಿ ಮೊದಲ ಮತದಾನ?
ಆಯೋಗದ ಸೂಚನೆಯಂತೆ ಇಂದಿನಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ಮತ ಸೊರಬದಲ್ಲಿ ಚಲಾವಣೆಯಾಗಿದೆ.
ಸೊರಬದ ಚಿಕ್ಕಪೇಟೆ ನಿವಾಸಿ ಕೃಷ್ಣಭಟ್ ಗೋಖಲೆ ಅವರು ತಮ್ಮ ನಿವಾಸದಿಂದಲೇ ಇಂದು ಮತ ಚಲಾಯಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಚುನಾವಣಾಧಿಕಾರಿ ಪ್ರವೀಣ್ ಜೈನ್, ಈ ಕ್ಷೇತ್ರದಲ್ಲಿ 162 ಮಂದಿ 80 ವರ್ಷ ಮೇಲ್ಪಟ್ಟವರು ಹಾಗೂ 82 ಮಂದಿ ಅಂಗವಿಕಲರನ್ನು ಗುರುತಿಸಲಾಗಿದ್ದು, ಅವರೆಲ್ಲಾ ಮನೆಯಿಂದಲೇ ಮತದಾನ ಮಾಡಲಿದ್ದಾರೆ. ಅವರ ಮನೆಯಲ್ಲೇ ಮತಗಟ್ಟೆ ಸ್ಥಾಪಿಸಿ ಮತದಾನಕ್ಕೆ ಅವಕಾಶ ಮಾಡಿಕೊಡಲು ವ್ಯವಸ್ಥೆ ಮಾಡಲಾಗಿದೆ ಎಂದರು.
ಮತದಾನದ ವೇಳೆ ಯಾರೆಲ್ಲಾ ಉಪಸ್ಥಿತಿ?
ಇನ್ನು, ಮನೆಯಿಂದಲೇ ಮತದಾನ ಮಾಡುವ ವೇಳೆ ಒಂದನೆಯ ಮತಗಟ್ಟೆ ಅಧಿಕಾರಿ, ಎರಡನೆಯ ಮತಗಟ್ಟೆ ಅಧಿಕಾರಿ, ಒಬ್ಬರು ಮೈಕ್ರೋ ಅರ್ಬ್ಸವರ್, ಒಬ್ಬರು ಕ್ಯಾಮೆರಾಮನ್, ಭದ್ರಾತಾ ಸಿಬ್ಬಂದಿ, ಸ್ಥಳೀಯ ಬಿಎಲ್’ಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಇರಲಿದ್ದಾರೆ.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post