ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಮರುಪರಿಶೀಲನೆ ಮಾಡಬೇಕು ಮತ್ತು ನನಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಮಾಡಲಾಗಿದೆ ಎಂದು ಎಸ್.ಪಿ. ದಿನೇಶ್ S P Dinesh ಹೇಳಿದರು.
ಅವರು ಇಂದು ಮತ್ತೊಬ್ಬ ಆಕಾಂಕ್ಷಿ ರಂಗಸ್ವಾಮಿ ಗೌಡ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಬದಲಾಯಿಸುವಂತೆ ಮನವಿ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷರಿಗೆ ಆಯನೂರು ಮಂಜುನಾಥ್ ಅವರಿಗೆ ಟಿಕೆಟ್ ಕೊಟ್ಟಿರುವುದೇ ಗೊತ್ತಿಲ್ಲ. ನಾವು ಭೇಟಿ ಮಾಡಿದಾಗ ಅಚ್ಚರಿಯಾಗಿ ನಮ್ಮನ್ನೆ ಕೇಳಿದ್ದಾರೆ. ನಾನು ನನ್ನ ಮೊಬೈಲ್‍ನಲ್ಲಿಯೇ ಎಐಸಿಸಿಯಿಂದ ಬಂದ ಪತ್ರವನ್ನು ಅವರಿಗೆ ತೋರಿಸಿದ್ದೇವು. ಅವರು ನಮ್ಮ ನಮ್ಮ ಮನವಿಯನ್ನು ಪುರಸ್ಕರಿಸುವ ವಿಶ್ವಾಸವಿದೆ ಎಂದರು.

Also read: ಶಿವಮೊಗ್ಗ | ಹೊಳೆ ಬಸ್ಟಾಪ್ ಬಳಿ ತುಂಗಾ ನದಿಗೆ ತ್ಯಾಜ್ಯ ಎಸೆಯುದು ತಡೆಯಲು ಮಾಸ್ಟರ್ ಪ್ಲಾನ್
ಅದು ಅಲ್ಲದೆ ಈಶ್ವರಪ್ಪ ಅವರಿಗೆ ಕಿಚಾಯಿಸಿ ಕಿಚಾಯಿಸಿ ಸ್ಪರ್ಧೆಗೆ ನಿಲ್ಲುವಂತೆ ಮಾಡಿದ್ದಾರೆ. ಈಶ್ವರಪ್ಪ ಸ್ಪರ್ಧೆ ಮಾಡಿದರೆ ಕಾಂಗ್ರೆಸ್‍ಗೆ ನಷ್ಟ ಎಂಬುದು ಅವರಿಗೆ ಏಕೆ ಅರ್ಥವಾಗಿಲ್ಲ. ಈಶ್ವರಪ್ಪ ಹಿಂದುಳಿದ ವರ್ಗಗಳ ಮತಗಳನ್ನು ಸೆಳೆದರೆ ಯಾರಿಗೆ ನಷ್ಟ ಎಂದು ಪ್ರಶ್ನಿಸಿದರು.

ಪಕ್ಷದಲ್ಲಿ ದುಡಿದಿರುವ ಯಾರಿಗೆ ಬೇಕಾದರೂ ಕೊಡಲಿ. ಕೆಲಸ ಮಾಡುತ್ತೇವೆ. ಆದರೆ ಆಯನೂರು ಮಂಜುನಾಥ್ ಪರ ಕೆಲಸ ಮಾಡಲು ಕಷ್ಟವಾಗುತ್ತದೆ ಮತ್ತು ಇಷ್ಟ ಇಲ್ಲ. ನಾವು ಈಗಾಗಲೇ ನೋಂದಣಿಯನ್ನು ಸಾಕಷ್ಟು ಮಾಡಿದ್ದೇವೆ. ಶ್ರಮ ಪಟ್ಟಿದ್ದೇವೆ. ನಮಗೆ ಟಿಕೆಟ್ ಕೊಡಿ ಎಂದು ಕೇಳುತ್ತಿದ್ದೇವೆ ಹೊರತು ಇದು ಪಕ್ಷ ವಿರೋಧಿ ಚಟುವಟಿಕೆಯಲ್ಲ. ಈ ಹಿಂದೆ ಎಷ್ಟೋ ಬಾರಿ ಟಿಕೆಟ್ ಅನೌನ್ಸ್ ಮಾಡಿ ಬದಲಾವಣೆ ಮಾಡಿದ ಉದಾಹರಣೆ ಇದೆ. ಹಾಗೆಯೇ ನನಗೂ ಮಾಡಲಿ. ಒಂದು ಪಕ್ಷ ಬದಲಾವಣೆ ಸಾಧ್ಯವಾಗದೆ ಇದ್ದರೆ ನಮಗೆ ಮುಂದಿನ ನಿರ್ಧಾರವನ್ನು ಮುಂದೆ ತಿಳಿಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ವಿಶ್ವನಾಥಕಾಶಿ, ಜ್ಯೋತಿ ಅರಳಪ್ಪ, ಜಗದೀಶ್ ಮಹಾಲಿಂಗೇಗೌಡ, ಸತೀಶ್‍ಕುಮಾರ್, ಕುಮಾರ್, ಮಹೇಶ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post