ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸೋಗಾನೆ ಬಳಿಯಿರುವ ಕೇಂದ್ರ ಕಾರಾಗೃಹಕ್ಕೆ ಇಂದು ದರ್ಶನ್ ಗ್ಯಾಂಗ್’ನ ಇಬ್ಬರು ಆರೋಪಿಗಳನ್ನು ಸ್ಥಳಾಂತರ ಮಾಡುವ ಮುನ್ನವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗಿದೆ.
ಇಂದು ಬೆಳ್ಳಂಬೆಳಗ್ಗೆಯೇ ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಎಸ್’ಪಿ ಮಿಥುನ್ ಕುಮಾರ್ ನೇತೃತ್ವದ ಟೀಂ ದಾಳಿ ನಡೆಸಿದೆ. ದಾಳಿ ನಡೆಸಿದ ತಂಡದಲ್ಲಿ ಸುಮಾರು 120ಕ್ಕೂ ಅಧಿಕ ಅಧಿಕಾರಿ ಹಾಗೂ ಸಿಬ್ಬಂದಿಗಳು ಇದ್ದರು ಎಂದು ತಿಳಿದುಬಂದಿದೆ.
ಪೊಲೀಸರು ಜೈಲಿನ ಪ್ರತಿ ಬ್ಯಾರಕ್’ಗಳನ್ನು ತಪಾಸಣೆ ನಡೆಸಿದ್ದಾರೆ. ಅಲ್ಲದೆ ನಿಷೇಧಿತ ವಸ್ತುಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಯಾವುದೇ ನಿಷೇದಿತ ವಸ್ತುಗಳು ಸಿಕ್ಕಿರುವುದಿಲ್ಲ. ಕೇವಲ ಬೀಡಿ ಹಾಗೂ ಸಿಗರೇಟುಗಳು ಮಾತ್ರ ದೊರೆತಿವೆ ಎಂದು ವರದಿಯಾಗಿದೆ.
ಇನ್ನು ರೇಣುಕಾಸ್ವಾಮಿ ಕೊಲೆ ಆರೋಪಿಗಳಿಬ್ಬರು ಅಂದರೆ ಲಕ್ಷ್ಮಣ್ ಹಾಗೂ ಜಗದೀಶ್ ಎನ್ನುವವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲು ನ್ಯಾಯಾಲಯ ಅನುಮತಿ ನೀಡಿದ್ದು, ಇಂದು ಕರೆತರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ ಮತ್ತು ಎ ಜಿ ಕಾರ್ಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆ, ಕೃಷ್ಣ ಮೂರ್ತಿ, ಡಿವೈಎಸ್.ಪಿ, ಡಿ.ಎ.ಆರ್, ಶಿವಮೊಗ್ಗ ಮಂಜುನಾಥ್ ಪೊಲೀಸ್ ನಿರೀಕ್ಷಕರು, ತುಂಗಾ ನಗರ ಪೊಲೀಸ್ ಠಾಣೆ, ರವಿ ಪಾಟೀಲ್, ಪೊಲೀಸ್ ನಿರೀಕ್ಷಕರು, ದೊಡ್ಡಪೇಟೆ ಪೊಲೀಸ್ ಠಾಣೆ, ದೀಪಕ್ ಪೊಲೀಸ್ ನಿರೀಕ್ಷಕರು, ಕೋಟೆ ಪೊಲೀಸ್ ಠಾಣೆ, ಸತ್ಯ ನಾರಾಯಣ, ಪೊಲೀಸ್ ನಿರೀಕ್ಷಕರು, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ, ಪ್ರಶಾಂತ್ ಸಶಸ್ತ್ರ ಪೊಲೀಸ್ ನಿರೀಕ್ಷಕರು, ಡಿಎಆರ್ ಶಿವಮೊಗ್ಗ ಹಾಗೂ 2 ಪಿಎಸ್ಐ ಮತ್ತು 100 ಪೊಲೀಸ್ ಸಿಬ್ಬಂಧಿಗಳ ತಂಡವು ಶಿವಮೊಗ್ಗ ಸೋಗಾನೆಯ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post