ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ ಸಂಭ್ರಮದಲ್ಲಿ ನಡೆಸಿಕೊಂಡು ಬರುತ್ತಿರುವ ಉಪನ್ಯಾಸ ಸರಣಿಯ ಎಂಟನೇ ಮಾಲಿಕೆ ಕಾರ್ಯಕ್ರಮವನ್ನು ಜ.3ರ ಮಂಗಳವಾರ ಸಂಜೆ 04:00 ಕ್ಕೆ ಎನ್.ಇ.ಎಸ್ ಕಛೇರಿ ಆವರಣದಲ್ಲಿರುವ ರಾಷ್ಟ್ರೀಯ ಪ್ರೌಢಶಾಲೆಯ ಒಳಾಂಗಣದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿಗಳು ಹಾಗೂ ಲೇಖಕರಾದ ಪ್ರೊ.ಕೃಷ್ಣೇಗೌಡ ಅವರು ʼಗುಣಾತ್ಮಕ ಜೀವನʼ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಧ್ಯಕ್ಷತೆ ವಹಿಸಲಿದ್ದು, ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ. ರಮೇಶ್ ಉಪಸ್ಥಿತರಿರುತ್ತಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















