ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಂತಾರಾಷ್ಟ್ರೀಯ ಮಾನಸಿಕ ಆರೋಗ್ಯ ದಿನ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ವಿದ್ಯಾರ್ಥಿ ಆಪ್ತ ಸಮಾಲೋಚನಾ ಮಾರ್ಗದರ್ಶಿ ಘಟಕ, ರಾಷ್ಟೀಯ ಸೇವಾ ಯೋಜನೆ, ಕ್ಷೇಮ ಟ್ರಸ್ಟ್, ರೋಟರಿ ಕ್ಲಬ್ ಶಿವಮೊಗ್ಗ, ಭಾರತೀಯ ವೈದ್ಯಕೀಯ ಸಂಘಗಳ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗದ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಖ್ಯಾತ ಮನೋವೈದ್ಯ ಡಾ.ಕೆ.ಆರ್. ಶ್ರೀಧರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷರಾದ ನಾಗಪತಿ ವಿ.ಭಟ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಡಾ. ಓಂಕಾರಪ್ಪ, ಪಿ.ಎನ್. ಮಮತಾ, ಡಾ.ಬಾಲಕೃಷ್ಣ ಹೆಗಡೆ ಮೊದಲಾದವರು ಉಪಸ್ಥಿತರಿದ್ದರು.
ಸ್ತ್ರೀ ರೋಗ ಹಾಗೂ ಪ್ರಸೂತಿ ತಜ್ಞೆ ಡಾ. ರಕ್ಷಾ ರಾವ್, ಡಾ. ಕೆ.ಎಸ್. ಶುಭ್ರತಾ, ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಉಪ ಪ್ರಾಚಾರ್ಯರಾದ ಡಾ.ಆರ್.ಎಂ. ಜಗದೀಶ ಅಧ್ಯಕ್ಷತೆ ವಹಿಸಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















