ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ, ಸಾಗರ, ಮತ್ತು ಸಿರಸಿಯಲ್ಲಿ ನಡೆದ ಮಾರಿಹಬ್ಬಕ್ಕೆ ಸಾರ್ವಜನಿಕರಿಗೆ ಓಡಾಡಲು ಬೆಂಗಳೂರಿನಿಂದ ವಿಶೇಷ ರೈಲು #Special Train ಸಂಚಾರಕ್ಕೆ ಅವಕಾಶ ಕಲ್ಪಿಸಿದ ಸಂಸದ ಬಿ.ವೈ. ರಾಘವೇಂದ್ರರವರಿಗೆ #MP Raghavendra ಜಿಲ್ಲಾ ಸಂಗೊಳ್ಳಿರಾಯಣ್ಣ ಕುರುಬರ ವೇದಿಕೆ ಅಧ್ಯಕ್ಷ ರಾಮಕೃಷ್ಣ ಮೂಡ್ಲಿ ಮತ್ತು ಈ ಸಂಘದ ನಿಕಟಪೂರ್ವ ಅಧ್ಯಕ್ಷ ಸಿ.ಹೆಚ್. ಮಾಲತೇಶ್ ಅಭಿನಂದನೆ ಸಲ್ಲಿಸಿದ್ದಾರೆ.
ಶಿವಮೊಗ್ಗ ನಗರದ ಸುತ್ತಮುತ್ತಲಿನ ಪ್ರದೇಶಗಳಿಂದ ಹಬ್ಬಗಳಿಗೆ ಹೋಗಿಬರಲು ಅನುಕೂಲವಾಗುವಂತೆ ಬೆಂಗಳೂರಿ ನಿಂದ ವಿಶೇಷ ರೈಲು ಸಂಚಾರವನ್ನು ಕಲ್ಪಿಸಿ, ಸುಮಾರು 1 ಲಕ್ಷ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಇದರಿಂದ ಪ್ರಯಾಣಿಕರು ಸುಗಮವಾಗಿ ಪ್ರಯಾಣಿಸಿದ್ದಾರೆ.
ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಿಗೂ ಇದೇ ರೀತಿಯ ಸಹಕಾರ ನೀಡುತ್ತೀರೆಂದು ಈ ಎಲ್ಲಾ ಪ್ರಯಾಣಿಕರ ಪರವಾಗಿ ಇವರಿಗೆ ಧನ್ಯವಾದ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















