ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡಿನಲ್ಲಿ ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗದ (Shivamogga) ವಿಶ್ವವಿಖ್ಯಾತ ಜೋಗ ಜಲಪಾತದ ದೃಶ್ಯ ವೈಭವ ನಿಧಾನವಾಗಿ ಮರುಕಳಿಸುತ್ತಿದೆ. ಇದರಿಂದಾಗಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಳ ಕಂಡಿದೆ.
ಜೋಗದ ರಾಜಾ, ರಾಣಿ, ರೋರರ್ ಹಾಗೂ ರಾಕೆಟ್ ಧಾರೆಗಳು ಮೈದುಂಬಿಕೊಂಡು ಹಾಲಿನ ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿವೆ. ಈ ಮನಮೋಹಕ ದೃಶ್ಯ ಪ್ರವಾಸಿಗರನ್ನು ಅಪಾರವಾಗಿ ಆಕರ್ಷಿಸುತ್ತಿದ್ದು, ಜೋಗ ಜಲಪಾತದ ಸೌಂದರ್ಯಕ್ಕೆ ಅವರು ಪಿಧಾ ಆಗಿದ್ದಾರೆ.
Also Read>> ಶಿವಮೊಗ್ಗ ಸೇರಿ ಮಲೆನಾಡಲ್ಲಿ ಮಳೆ ಅಬ್ಬರ | ನೂರಾರು ವಿದ್ಯುತ್ ಕಂಬಗಳು ಧರೆಗೆ
ಇಲ್ಲಿನ ಪ್ರವಾಸಿ ಮಾಹಿತಿ ಕೇಂದ್ರದ ದಾಖಲೆಗಳ ಪ್ರಕಾರ, ಜುಲೈ 4ರಂದು ಶನಿವಾರ ಸುಮಾರು 3,500 ಮಂದಿ ಜೋಗ ಜಲಪಾತ ವೀಕ್ಷಣೆಗಾಗಿ ಭೇಟಿ ನೀಡಿದ್ದರು. ಭಾನುವಾರ ಈ ಸಂಖ್ಯೆ 6,000 ದಾಟಿದೆ. ವಾರಾಂತ್ಯದಲ್ಲಿ ಪ್ರವಾಸಿಗರ ದಂಡು ಜೋಗದಲ್ಲಿ ಜಮಾಯಿಸುತ್ತಿರುವುದು ಗಮನಾರ್ಹವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










