ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಕ್ರೀಡೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಮ್ಯಾಕ್ಸ್ ಆಸ್ಪತ್ರೆಯ ಅರ್ಥೋಪೆಡಿಕ್ ಶಸ್ತ್ರಚಿಕಿತ್ಸಕ ಡಾ. ಶಿಶಿರ್ ಹೇಳಿದರು.
ಜೈನ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸಮ್ಮಿಲನ 3.0 ಪೋಷಕರ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬ್ಲೂಮಿಂಗ್ ಕಿಡ್ಸ್ ಸಂಸ್ಥೆಯ ಸಂಸ್ಥಾಪಕರಾದ ಕಲಾಮಾತನಾಡಿ ಪೋಷಕರು ಕೂಡ ಮಕ್ಕಳೊಂದಿಗೆ ಕ್ರೀಡಾ ಕಾಯಕ್ರಮಗಳಲ್ಲಿ ಭಾಗವಹಿಸುವುದು ಅಗತ್ಯ ಎಂದು ಸಲಹೆ ನೀಡಿದರು.
ಮುಖ್ಯ ಅತಿಥಿಗಳ ಕಿವಿಮಾತಿನಿಂದ ಪೋಷಕರ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ದೊರೆಯಿತು. ಪೋಷಕರು ಉತ್ತಾಹದಿಂದ ಭಾಗವಹಿಸಿ ಕ್ರೀಡಾಕೂಟಕ್ಕೆ ಮತ್ತಷ್ಟು ಮೆರಗು ನೀಡಿದರು.
ಕಾರ್ಯಕ್ರಮದ ಅಂಗವಾಗಿ ಮೊದಲಿಗೆ ಪುರುಷರ ಹೂಪ್ Race ನಡೆಯಿತು. ನಂತರ ಮಹಿಳೆಯರ Throwball ಪಂದ್ಯಾವಳಿ, ಪುರುಷರ Volleyball ಪಂದ್ಯಾವಳಿ ಹಾಗೂ ದಂಪತಿಗಳ ಸ್ಪರ್ಧೆಗಳು ಉತ್ಸಾಹ ಭರಿತವಾಗಿ ನಡೆದವು. ಪೋಷಕರು ಉತ್ಸಾಹಭರಿತವಾಗಿ ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕ್ರೀಡಾ ಕೌಶಲ್ಯವನ್ನು ಪ್ರದರ್ಶಿಸಿದರು.
ವಿಭಿನ್ನ ವಿಭಾಗಗಳಲ್ಲಿ ವಿಜೇತರಾದ ಪೋಷಕರಿಗೆ ಬಹುಮಾನ ವಿತರಣೆ ಮಾಡಲಾಯಿತು. ಆರಂಭದಿಂದ ಅಂತ್ಯವರೆಗೆ ಪೋಷಕರ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮಕ್ಕೆ ವಿಶೇಷ ಮೆರಗು ಸೇರಿತು. ಜೈನ್ ಪಬ್ಲಿಕ್ ಶಾಲೆಯು ಪೋಷಕರ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಿ ಮತ್ತೊಮ್ಮೆ ಕ್ರೀಡೆಗೆ ನೀಡಿರುವ ಪ್ರಾಮುಖ್ಯತೆಯನ್ನು ಸಾಬೀತುಪಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















