ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕ್ರೀಡೆಗಳು #Sports ಪ್ರತಿ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಗುರುದತ್ತ ಹೆಗಡೆ #Gurudatta Hegde ಹೇಳಿದರು.
ಅವರು ಇಂದು ನಗರದ ಡಿ. ಎ. ಆರ್. ಕವಾಯತು ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಬಲೂನುಗಳನ್ನು ಹಾರಿ ಬಿಡುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಕ್ರೀಡೆ ಸ್ಫೂರ್ತಿದಾಯಕ ಆಗಿರುವಂತೆ ಪ್ರೇರಣಾದಾಯಕವಾಗಿದೆ. ದೈಹಿಕ ಸದೃಢತೆಗೆ ಸಹಕಾರಿಯಾಗಿದೆ ಎಂದ ಅವರು ಸದಾ ಲವಲವಿಕೆಯಿಂದಿರಲು, ಉತ್ಸುಕರಾಗಿರಲು ಪೂರಕವಾಗಿದೆ ಎಂದರು.

ಜಿಲ್ಲೆಯಲ್ಲಿ ಶಾಂತಿ – ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ, ಕೋಮುಗಲಭೆ ಮತ್ತಿತರ ಕುಕೃತ್ಯಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ಸಮರ್ಥವಾಗಿ ಕಾರ್ಯನಿರ್ವಹಿಸಿ ರಾಜ್ಯಕ್ಕೆ ಮಾದರಿಯಾಗಿರುವುದು ಪ್ರಶಂಸನೀಯ ಸಂಗತಿ ಎಂದರು.
ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟ ಅಧಿಕಾರಿ ಜಿ. ಕೆ. ಮಿಥುನ್ ಕುಮಾರ್, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಗಳಾದ ಎ.ಜಿ.ಕಾರಿಯಪ್ಪ, ರಮೇಶ್ ಗೌಡ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಮಹಿಳಾ ಮತ್ತು ಪುರುಷ ಅಧಿಕಾರಿ – ಸಿಬ್ಬಂಧಿಗಳು, ಪೊಲೀಸ್ ಕ್ರೀಡಾ ಪಟುಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post