ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾಭ್ಯಾಸದ ಜತೆಗೆ ವಿದ್ಯಾರ್ಥಿಗಳು ಕ್ರೀಡೆಯಲ್ಲೂ ತೊಡಗಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್ K E Kantesh ಹೇಳಿದರು.
ನಗರದ ನೆಹರು ಕ್ರೀಡಾಂಗಣದಲ್ಲಿ ಸಹ್ಯಾದ್ರಿ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ದಿ. ವೇಣುಗೋಪಾಲ್ ರಾವ್ ಸ್ಮರಣಾರ್ಥ ಭಾನುವಾರ ಆಯೋಜಿಸಿದ್ದ ಅಂತರ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆಯು ಪ್ರತಿಯೊಬ್ಬರಿಗೂ ಆರೋಗ್ಯ ನೀಡುವುದಲ್ಲದೇ ಶಿಸ್ತನ್ನು ಕಲಿಸುತ್ತದೆ. ಇತ್ತೀಚೆಗೆ ಅನೇಕ ಕ್ರೀಡಾಪಟುಗಳು ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲು ಮೇಲುಗೈ ಸಾಧಿಸುತ್ತಿರುವುದು ಸಂತಸದ ಸಂಗತಿ. ಕೆಲವೆಡೆ ಕ್ರೀಡಾಪಟುಗಳು ಶಾಸಕ, ಮಂತ್ರಿ, ಮುಖ್ಯಮಂತ್ರಿಗಳು ಅಲ್ಲದೆ, ಕೆಲವು ದೇಶಗಳಲ್ಲಿ ಪ್ರಧಾನ ಮಂತ್ರಿ ಹುದ್ದೆಯನ್ನು ಕೂಡ ಅಲಂಕರಿಸಿರುವುದು ಗಮನಾರ್ಹ. ಆದ್ದರಿಂದ ಕ್ರೀಡಾಪಟುಗಳು ಕ್ರೀಡೆಯಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸುವುದರ ಬಗ್ಗೆ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
ಸೂಡಾ ಅಧ್ಯಕ್ಷ ಎನ್.ಜೆ. ನಾಗರಾಜ್ ಮಾತನಾಡಿ, ‘ಇಂದಿನ ಒತ್ತಡದ ಜೀವನದಿಂದ ಹೊರಬರಲು ಕ್ರೀಡೆ ಪ್ರತಿಯೊಬ್ಬರಿಗೂ ಸಹಕಾರಿ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಲು ಸಾಧ್ಯ. ಅಲ್ಲದೆ, ಶಿವಮೊಗ್ಗ ಸಹ್ಯಾದ್ರಿ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ಸದಸ್ಯರು ನಿರಂತರವಾಗಿ ಪಂದ್ಯಾವಳಿ ಆಯೋಜಿಸುವ ಮೂಲಕ ಹೊಸ ಪ್ರತಿಭೆಗಳನ್ನು ಸೃಷ್ಟಿಸುತ್ತಿರುವುದು ಮೆಚ್ಚುಗೆಯ ಸಂಗತಿ ಎಂದರು.
Also read: ಮಕ್ಕಳಿಗೆ ಶಿಕ್ಷಣ ನೀಡಿದಾಗ ಮಾತ್ರ ಸ್ವತಂತ್ರವಾಗಿ ಬದುಕಲು ಸಾಧ್ಯ: ಸಂಸದ ರಾಘವೇಂದ್ರ
ಈ ಸಂದರ್ಭದಲ್ಲಿ ಸಹ್ಯಾದ್ರಿ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ಅಧ್ಯಕ್ಷ ಶಂಕರನಾರಾಯಣ, ಶಿವಮೊಗ್ಗ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಜಿ.ಪರಮೇಶ್ವರಪ್ಪ, ನಿವೃತ್ತ ದೈಹಿಕ ಶಿಕ್ಷಕ ಡಾ.ಅಪ್ಪಣ್ಣ ಗಸ್ತಿ, ಹಿರಿಯ ರಾಷ್ಟ್ರೀಯ ಕ್ರೀಡಾಪಟುಗಳಾದ ಸಂತೋಷ್ ಹೊಳಲೂರು, ಅನಿಲ್ ಸಾಗರ್ ಮತ್ತಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post