ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವ ಹಿಂದೂ ಪರಿಷತ್ ಬಜರಂಗ ದಳ, ಶ್ರೀ ರಾಮನವಮಿ ಸೇವಾ ಸಮಿತಿ ವತಿಯಿಂದ ಇಂದು ನಗರದ ಅಕ್ಕ ಮಹಾದೇವಿ ವೃತ್ತದಲ್ಲಿ ಶ್ರೀರಾಮ ಹಾಗೂ ಆಂಜನೇಯರ ವಿಶೇಷ ಅಲಂಕಾರ ಹಾಗೂ ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಕರ್ನಾಟಕ ದಕ್ಷಿಣ ಪ್ರಾಂತ್ಯ ಕಾರ್ಯವಾಹ ಪಟ್ಟಾಭಿರಾಮ್, ವಿಧಾನ ಪರಿಷತ್ ಸದಸ್ಯರಾದ ಧನಂಜಯ ಸರ್ಜಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಜಿ.ಪಂ. ಮಾಜಿ ಸದಸ್ಯರ ಕೆ.ಈ. ಕಾಂತೇಶ್, ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಿ. ವಾಸುದೇವ್, ಎಸ್.ಎಸ್. ಜ್ಯೋತಿಪ್ರಕಾಶ್ ಹಾಗೂ ಪ್ರಾಂತ ಸಂಘಟನಾ ಸಾಮಾಜಿಕ ಸಾಮರಸ್ಯ ಪ್ರಮುಖರಾದ ರಮೇಶ್ ಬಾಬು, ಕಾರ್ಯದರ್ಶಿ ಆನಂದ್‍ರಾವ್, ರಾಜೇಶ್‍ಗೌಡ, ಸುರೇಶ್ ಬಾಬು, ಪುಟ್ಟಣ್ಣ ಮತ್ತು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















