ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ–ಮಂಗಳೂರು ರೈಲ್ವೇ ಯೋಜನೆಯ ಪ್ರಸ್ತಾವಿತ ವರದಿಯಲ್ಲಿ ರೈಲು ಮಾರ್ಗವನ್ನು ಶಿವಮೊಗ್ಗ–ತೀರ್ಥಹಳ್ಳಿ–ಶೃಂಗೇರಿ ಮೂಲಕ ಸಾಗುವಂತೆ ಸೂಚಿಸಲಾಗಿದೆ. ಆದರೆ, ಈ ಹಿಂದೆ ಎನ್.ಆರ್.ಪುರದ ಸಾರ್ವಜನಿಕರು ರೈಲು ಮಾರ್ಗವನ್ನು ಎನ್.ಆರ್.ಪುರದ ಮೂಲಕವೇ ಹಾದು ಹೋಗುವಂತೆ ಒತ್ತಾಯಿಸಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
Shivamogga – Sringeri Train | ಪರಿಸರವಾದಿಗಳ ಆಕ್ಷೇಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈಲ್ವೇ ಮಾರ್ಗಕ್ಕೆ ಸಂಬಂಧಿಸಿದಂತೆ ಪರಿಸರವಾದಿಗಳ ಆಕ್ಷೇಪಣೆಗಳು ಹಾಗೂ ಕೆಲವು ತಾಂತ್ರಿಕ ಮತ್ತು ಸ್ಥಳೀಯ ಸಮಸ್ಯೆಗಳಿವೆ ಎಂದು ಹೇಳಿದರು. ಈ ಕುರಿತು ಈಗಾಗಲೇ ಒಂದು ಸುತ್ತಿನ ಸಭೆ ನಡೆದಿದ್ದರೂ, ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದರು.

Also read: Shivamogga | ಸಾಲದ ಬಾಧೆಯಿಂದ ನೊಂದು ಅಟೋ ಚಾಲಕ ಆತ್ಮಹತ್ಯೆ
ಮುಂಬರುವ ವಿಧಾನಮಂಡಲ ಅಧಿವೇಶನದ ಬಳಿಕ ಮತ್ತೊಮ್ಮೆ ಸಭೆ ನಡೆಸಿ, ವಿವಿಧ ಮಾರ್ಗಗಳ ಸಾಧಕ–ಬಾಧಕಗಳನ್ನು ಪರಿಶೀಲಿಸಲಾಗುವುದು. ಪರಿಸರಕ್ಕೆ ಕನಿಷ್ಠ ಹಾನಿಯಾಗುವ ಹಾಗೂ ಸಾರ್ವಜನಿಕರಿಗೆ ಹೆಚ್ಚು ಅನುಕೂಲಕರವಾಗುವ ಮಾರ್ಗವನ್ನು ಅಂತಿಮಗೊಳಿಸಲಾಗುವುದು ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









