ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಪ್ರಥಮ ಭಾಷೆ, ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ 150 ಕೇಂದ್ರಗಳಲ್ಲಿ ನಡೆದ ವಿನೂತನ ಬಹು ಆಯ್ಕೆಯ ಮಾದರಿಯ ಎಸ್ಎಸ್ಎಲ್ಸಿ ಪರೀಕ್ಷೆಯು ಸುಗಮವಾಗಿ ನಡೆಯಿತು.
ಪ್ರಥಮ ಭಾಷೆ, ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಲ್ಲಿ ಶೇ. 99.7 ವಿದ್ಯಾರ್ಥಿಗಳು ಹಾಜರಾಗಿದ್ದರು. ಪ್ರಥಮ ಭಾಷಾ ವಿಷಯಕ್ಕೆ ಒಟ್ಟು 22745 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 22681 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟು 64 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ದ್ವಿತೀಯ ಭಾಷಾ ವಿಷಯದಲ್ಲಿ 22960 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 22890 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ. ಒಟ್ಟು 70 ವಿದ್ಯಾರ್ಥಿಗಳು ಗೈರಾಗಿರುತ್ತಾರೆ. ತೃತೀಯ ಭಾಷಾ ವಿಷಯದಲ್ಲಿ 22767 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 22695 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 71 ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ.
ಅನಾರೋಗ್ಯ ಕಾರಣದಿಂದ ಒಟ್ಟು 4 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದು, ಕೋವಿಡ್ ಪಾಸಿಟಿವ್ ಇದ್ದ ಮೂವರು ವಿದ್ಯಾರ್ಥಿಗಳು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಡಿಡಿಪಿಐ ಎನ್.ಎಂ. ರಮೇಶ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post