ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಗರ ತಾಲೂಕಿನ ಯಡೇಹಳ್ಳಿಯಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.
ಪರಶುರಾಮ ಬಾಬು (16) ಸಾವಿಗೀಡಾದ ಬಾಲಕ ಎಂದು ಗುರುತಿಸಲಾಗಿದೆ.
ಪರಶುರಾಮನ ಮೃತದೇಹ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪರಶುರಾಮ ಬಾಬು ಆನಂದಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಚೆನ್ನಾಗಿ ಓದುತ್ತಿದ್ದ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
Also read: ಭದ್ರಾವತಿ | ರಸ್ತೆ ಅಪಘಾತ | ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯೇಬೇಕಿದ್ದ ವಿದ್ಯಾರ್ಥಿನಿ ಸಾವು
ಈ ಬಗ್ಗೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post