ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಎಸ್ಸ್ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ ಎಸ್’ಎಸ್’ಎಸ್’ಸಿ ಪರೀಕ್ಷೆ SSLC Exam ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಒಟ್ಟು 78 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ನಿಯೋಜನೆಗೊಂಡಿರುವ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಸಿಟ್ಟಿಂಗ್ ಸ್ಕಾö್ಯಡ್, ಮಾರ್ಗಾಧಿಕಾರಿಗಳು ಸೇರಿದಂತೆ ಪ್ರತಿ ಅಧಿಕಾರಿ ತಮ್ಮ ತಮ್ಮ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕೆಂದು ಅವರು ಸೂಚನೆ ನೀಡಿದರು.
Also read: ಗುಡ್ ನ್ಯೂಸ್ | ನಗರದಲ್ಲಿ ಆರಂಭವಾಗಲಿದೆ ವರ್ಲ್ಡ್ ಕ್ಲಾಸ್ ಆರ್ಯ ವಿಜ್ಞಾನ ಪಿಯು ಕಾಲೇಜು
ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳಾದ ಆಸನ, ಕುಡಿಯುವ ನೀರು ಸೇರಿದಂತೆ ಇತರೆ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ಪೊಲೀಸ್ ಇಲಾಖೆಯಿಂದ ಒದಗಿಸಲಾಗುವುದು. ವಾಹನ ವ್ಯವಸ್ಥೆಯನ್ನು ತಮ್ಮ ವತಿಯಿಂದ ಮಾಡಲಾಗುವುದು. ಸುಗಮ ಪರೀಕ್ಷೆಗೆ ಅಗತ್ಯವಾದ ಎಲ್ಲ ಸಹಕಾರವನ್ನು ನೀಡಲಾಗುವುದು. ಪ್ರತಿ ಹಂತದಲ್ಲಿ ನಿಯೋಜಿತ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಶಿಸ್ತಿನಿಂದ ನಿರ್ವಹಿಸುವ ಮೂಲಕ ಯಶಸ್ವಿಯಾಗಿ ಪರೀಕ್ಷೆಗಳನ್ನು ನಡೆಸಬೇಕೆಂದು ಸೂಚನೆ ನೀಡಿದರು.

ಜಿಪಂ ಉಪಕಾರ್ಯದರ್ಶಿ ದಾಸೇಗೌಡ ಮಾತನಾಡಿ, ಚುನಾವಣೆ ಮತ್ತು ಪರೀಕ್ಷೆಗಳು ಒಟ್ಟಾಗಿ ಘೋಷಣೆಯಾಗಿವೆ. ಎರಡನ್ನೂ ಸುಗವಾಗಿ ನಡೆಸುವಂತಹ ವ್ಯವಸ್ಥೆ ಮಾಡಿಕೊಂಡು ಯಶಸ್ವಿಗೊಳಿಸಬೇಕು. ವಿದ್ಯಾರ್ಥಿಗಳು ಚೆನ್ನಾಗಿ ಪರೀಕ್ಷೆಗಳನ್ನು ಬರೆಯುವ ಮೂಲಕ ಜಿಲ್ಲೆಗೆ ಉನ್ನತ ಸ್ಥಾನ ತಂದು ಕೊಡಬೇಕೆಂದರು.
ಡಯಟ್ ಪ್ರಾಂಶುಪಾಲರಾದ ಬಸವರಾಜಪ್ಪ ಮಾತನಾಡಿ, ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಶಿಕ್ಷಕರು ಉತ್ತಮವಾಗಿ ಪ್ರೋತ್ಸಾಹ ನೀಡಿದ್ದಾರೆ. ಗುಣಮಟ್ಟದ ಫಲಿತಾಂಶ ಬರುವುದೆಂಬ ಭರವಸೆ ಇದೆ ಎಂದರು.

ಸಭೆಯಲ್ಲಿ ಎಲ್ಲ ತಾಲ್ಲೂಕುಗಳ ಬಿಇಓ ಗಳು, ಶಿಕ್ಷಣಾಧಿಕಾರಿಗಳು, ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post