ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಸ್‍ಎಸ್‍ಎಲ್‍ಸಿ ಫಲಿತಾಂಶ #SSLC Result ಪ್ರಕಟವಾಗಿದ್ದು, ಶಿವಮೊಗ್ಗ ಜಿಲ್ಲೆ ಈ ಬಾರಿ 3ನೇ ಸ್ಥಾನ ಗಳಿಸಿದೆ. ಉಡುಪಿ ಶೇ.94,ದಕ್ಷಿಣ ಕನ್ನಡ ಶೇ.92.12, ಶಿವಮೊಗ್ಗ ಶೇ.88.67ರಷ್ಟು ಫಲಿತಾಂಶ ಪಡೆದು ಮೊದಲ 3 ಸ್ಥಾನ ಪಡೆದುಕೊಂಡಿವೆ. ಯಾದಗಿರಿ ಶೇ.50.59ರಷ್ಟು ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗ ಕಳೆದ ಬಾರಿ 28ನೇ ಸ್ಥಾನದಲ್ಲಿತ್ತು. ಈ ಬಾರಿ 3ನೇ ಸ್ಥಾನಕ್ಕೆ ಜಿಗಿದಿದ್ದು, ಫಲಿತಾಂಶದಲ್ಲಿ ದಾಖಲೆಯಾಗಲಿದೆ. ಜಿಲ್ಲೆಯಲ್ಲಿ ಪರೀಕ್ಷೆ ಬರೆದ 23028 ವಿದ್ಯಾರ್ಥಿಗಳಲ್ಲಿ 20420 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Also read: ಗುಂಡಿನ ದಾಳಿ | ಮಲಗಿದ್ದಲ್ಲೇ 7 ಕಾರ್ಮಿಕರ ಭೀಕರ ಹತ್ಯೆ | ಘಟನೆ ನಡೆದಿದ್ದೆಲ್ಲಿ?
8 ಶಿಕ್ಷಕರ ತಂಡಗಳು ಪ್ರತಿ ವಿದ್ಯಾರ್ಥಿಯ ಸಮೀಕ್ಷೆ ನಡೆಸಿ ಅವರು ಯಾವ ವಿಷಯದಲ್ಲಿ ಹಿಂದುಳಿದಿದ್ದಾರೆ ಎಂಬುವುದನ್ನು ಪರಿಶೀಲಿಸಿದರು. ನಂತರ ಅವರಿಗೆ ಅಗತ್ಯವಾದ ಮಾರ್ಗದರ್ಶನ ನೀಡಲಾಯಿತು ಎಂದು ತಿಳಿಸಿದರು.

ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರು ಉತ್ತೀರ್ಣರಾಗಲು ಅವಶ್ಯಕವಾದ ಕಲಿಕೆಯ ಮಾರ್ಗದರ್ಶನ ನೀಡಲಾಯಿತು. ಪಾಸಿಂಗ್ ಪ್ಯಾಕೇಜ್ ರೂಪಿಸಿ ಪ್ರಶ್ನೆ ಪತ್ರಿಕೆಗಳನ್ನು ರಚಿಸಿ ನೀಡಲಾಯಿತು. ಇದು ಕೂಡ ಫಲಿತಾಂಶ ಹೆಚ್ಚಳಕ್ಕೆ ಕಾರಣವಾಯಿತು. ಬಹಳ ಮುಖ್ಯವಾಗಿ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನಿಂದ ಪರೀಕ್ಷೆ ಸಿಸಿಕ್ಯಾಮೆರಾ, ವೆಬ್ ಕ್ಯಾಮ್ ಮೂಲಕವು ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಿಲ್ಲದಂತೆ ನಿಗಾವಹಿಸಲಾಗಿತ್ತು. 78 ಪರೀಕ್ಷಾ ಕೇಂದ್ರಗಳಲ್ಲಿ ವೆಬ್‍ಕ್ಯಾಮರಾ ಅಳವಡಿಸಿ 11 ಲ್ಯಾಪ್‍ಟಾಪ್‍ಗಳ ಮೂಲಕ ವೀಕ್ಷಿಸಲಾಯಿತು ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post