ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಊರುಗಡೂರಿನ ಸೂಳೆಬೈಲಿನಲ್ಲಿ SSLC ವಿದ್ಯಾರ್ಥಿ ಸಂಕೇತ್ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ #Murder ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ನಿವಾಸಕ್ಕೆ ಖುದ್ದು ಭೇಟಿ ನೀಡಿ, ದುಃಖತಪ್ತ ಕುಟುಂಬವರ್ಗದವರಿಗೆ ಸಂಸದ ಬಿ.ವೈ. ರಾಘವೇಂದ್ರ #MP Raghavendra ಸಾಂತ್ವಾನ ಹೇಳಿದರು.
ಆಸರೆಯಾಗಬೇಕಿದ್ದ ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಕಂಡು ಮನಸ್ಸಿಗೆ ಅತೀವ ಸಂಕಟವಾಯಿತು. ಭಗವಂತನು ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ಕರುಣಿಸಲಿ ಎಂದರು.
ಈ ದುರ್ಘಟನೆಗೆ ಹೊಣೆಗಾರರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರನ್ನು ಬಂಧಿಸಿ ಕಾನೂನಿನ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಜೊತೆಗೆ, ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಸರ್ಕಾರ ತಕ್ಷಣ ಪರಿಹಾರ ನೀಡಿ, ಅಗತ್ಯ ನೆರವು ಒದಗಿಸಬೇಕು ಎಂದರು.
ಜನರ ಭದ್ರತೆ ಸರ್ಕಾರದ ಮೊದಲ ಆದ್ಯತೆಯಾಗಬೇಕು. ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಕಾನೂನು ಸುವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















