ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನಾ ಎರಡನೆಯ ಅಲೆಯಲ್ಲಿ ನಗರದಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ.
ಕೊರೋನಾ ಮೊದಲನೆಯ ಅಲೆಯ ಸಂದರ್ಭದಲ್ಲಿ ನಗರದಾದ್ಯಂತ ಪ್ರತಿನಿತ್ಯ ಸಾಲು ಸಾಲು ಸ್ಯಾನಿಟೈಸೇಷನ್ ಮಾಡಲಾಗುತ್ತಿತ್ತು. ಆದರೆ, ಎರಡನೆಯ ಅಲೆ ಆರಂಭವಾದ ನಂತರ ನಗರದ ಸಾರ್ವಜನಿಕ ಪ್ರದೇಶಗಳಲ್ಲಿ ಮತ್ತೆ ಆರಂಭ ಮಾಡಲಾಗಿದೆ.
ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಮೀರ್ ಅಹ್ಮದ್ ವೃತ್ತ, ಎಂಕೆಕೆ ರಸ್ತೆ ಸೇರಿದಂತೆ ವಿವಿಧ ಭಾಗಗಳಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸ್ಯಾನಿಟೈಷನ್ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post