ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನಾ ಎರಡನೆಯ ಅಲೆಯ ನಂತರ 9, 10, 11 ಮತ್ತು 12ನೆಯ ತರಗತಿಗಳು ಇಂದಿನಿಂದ ಆರಂಭವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸರ್ಕಾರಿ ಕಾಲೇಜಿಗೆ ಭೇಟಿ ನೀಡಿ, ಮಕ್ಕಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಗೆ ಆಗಮಿಸಿದ್ದರು. ಇಲ್ಲಿಗೆ ಭೇಟಿ ನೀಡಿದ ಸಚಿವರಿಗೆ ಸಿಬ್ಬಂದಿಗಳು ಆರತಿ ಮಾಡುವ ಮೂಲಕ ಸ್ವಾಗತ ಕೋರಿದರು. ಆನಂತರ ಆಗಮಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಕಿಯರು ಆರತಿ ಮಾಡಿ, ಭರಮಾಡಿಕೊಂಡರೆ, ಸಚಿವ ಈಶ್ವರಪ್ಪ ಮಕ್ಕಳಿಗೆ ಗುಲಾಬಿ ನೀಡುವ ಮೂಲಕ ಸ್ವಾಗತ ಕೋರಿದರು.
ಈ ವೇಳೆ ಶಾಲೆ ಆರಂಭದ ಬಗ್ಗೆ ಕೆಲವು ವಿದ್ಯಾರ್ಥಿನಿಯರನ್ನು ಮಾತನಾಡಿಸಿದ ಸಚಿವರು, ಮಕ್ಕಳಲ್ಲಿನ ಭಾವನೆಯನ್ನು ಹೊರಹಾಕಿಸುವ ಕೆಲಸ ಮಾಡಿದರು. ಆನಂತರ ತರಗತಿಗಳಿಗೆ ತೆರಳಿ ಕೊರೋನಾ ನಿಯಮಾಳಿಗಳಂತೆ ಎಲ್ಲಾ ವ್ಯವಸ್ಥೆಗಳು ಸರಿಯಾಗಿರುವುದರ ಬಗ್ಗೆ ಪರಿಶೀಲನೆ ನಡೆಸಿದರು.
ಪ್ರಮುಖವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಲಹೆ ನೀಡಿದ ಅವರು, ಒಂದು ಬೆಂಚಿಗೆ ಇಬ್ಬರು ವಿದ್ಯಾರ್ಥಿಗಳನ್ನು ಕೂರಿಸುವಂತೆ ಸೂಚಿಸಿದರು.
ವಿದ್ಯಾರ್ಥಿಗಳ ಬಳಿ ತೆರಳಿ ಮಾತನಾಡಿದ ಸಚಿವರು, ಯಾವುದೇ ರೀತಿಯ ಸಮಸ್ಯೆಗಳಿದ್ದರು ನಮಗೆ ತಿಳಿಸಿ ಪರಿಹಾರ ಮಾಡುತ್ತೇವೆ. ಯಾವುದೇ ರೀತಿಯ ಆತಂಕವಿಲ್ಲದೆ ಅಧ್ಯಯನದ ಬಗ್ಗೆ ಮಾತ್ರ ಗಮನಹರಿಸಿ ಎಂದು ವಿದ್ಯಾರ್ಥಿಗಳ ಜೊತೆ ಪ್ರೋತ್ಸಾಹದಾಯಕ ಮಾತುಗಳನ್ನಾಡಿದರು. ಈ ವೇಳೆ ಡಿಡಿಪಿಐ ರಮೇಶ್, ಬಿಇಓ ನಾಗರಾಜ್ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post