No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸ್ಟಾರ್ಟ್ ಅಪ್ | ಶಿವಮೊಗ್ಗದಿಂದಲೇ ನಡೆದ FPO ವ್ಯವಹಾರವೆಷ್ಟು? ಕೇಂದ್ರ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ

kalpa News by kalpa News
January 18, 2025
in ಶಿವಮೊಗ್ಗ
0
ಸ್ಟಾರ್ಟ್ ಅಪ್ | ಶಿವಮೊಗ್ಗದಿಂದಲೇ ನಡೆದ FPO ವ್ಯವಹಾರವೆಷ್ಟು? ಕೇಂದ್ರ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭಾರತದ ಆರ್ಥಿಕ ವ್ಯವಸ್ಥೆ ಕೃಷಿಯ ಮೇಲೆ ಅವಲಂಬಿತವಾಗಿದ್ದು, ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಯೋಜನೆಯಿಂದ ಕೃಷಿ ಕ್ಷೇತ್ರದಲ್ಲಿ ಅನೇಕ ಬದಲಾವಣೆಯಾಗುತ್ತಿದ್ದು, ಕೃಷಿಕರಿಗೆ ವರದಾನವಾಗಲಿದೆ ಎಂದು ಕೇಂದ್ರ ಕೃಷಿ, ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌವ್ಹಾಣ್ #ShivrajSingh Chouhan ಹೇಳಿದ್ದಾರೆ.

ಅವರು ಇಂದು ನಗರದ ಫೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಅನ್ವೇಷಣ್ ಇನ್ನೋವೇಶನ್ಸ್ ಅಂಡ್ ಎಂಟ್ರೆಪ್ರೆಂಯೂರಿಯಾಲ್ ಪೋರಂ ವತಿಯಿಂದ ನಡೆದ ಮಲೆನಾಡು ಸ್ಟಾರ್ಟ್ ಅಪ್ ಸಮಿಟ್ ಕಾರ್ಯಕ್ರಮವನ್ನು #Malnad Startup Summit Program ಉದ್ಘಾಟಿಸಿ ಮಾತನಾಡಿದರು.
ನಾವು ಜನಸೇವಕರು ರೈತರ ಸೇವೆ ಮಾಡುವ ಭಾಗ್ಯ ನನಗೆ ಕೊಟ್ಟಿದ್ದು, ರೈತರ ಸೇವೆಯನ್ನು ದೇವರ ಪೂಜೆ ಎಂದುಕೊಂಡಿದ್ದೇನೆ. ದೇಶದಲ್ಲೇ ಮೊದಲ ಬಾರಿಗೆ ಕೃಷಿ ಬಜೆಟ್‍ನ್ನು ಮಂಡಿಸಿದ ಬಿ.ಎಸ್. ಯಡಿಯೂರಪ್ಪನವರು #B S Yadiyurappa ನಮಗೆಲ್ಲ ಮಾರ್ಗದರ್ಶಕರು. ದೇಶದಲ್ಲಿ ಭಾರತದ ಅರ್ಥವ್ಯವಸ್ಥೆಗೆ ಶೇ.90ರಷ್ಟು ಕೃಷಿಕರಿಂದ ಯೋಗದಾನವಿದೆ. ಈ ಬಾರಿ ಕೃಷಿ ಉತ್ಪಾದನೆಯ ಪ್ರಮಾಣ, 3.5ರಿಂದ ಶೇ.4ಕ್ಕೆ ಏರಿಕೆಯಾಗಿದೆ. ಉತ್ಪಾನೆಯಲ್ಲಿ ಹೆಚ್ಚಳ ಅತ್ಯಾಧುನಿಕ ಹೊಸ ಸಂಶೋಧನೆಗಳು ಉತ್ತಮ ಬೀಜಗಳ ಉತ್ಪಾದನೆ ಮತ್ತು ವಿತರಣೆ ಮಾಡಬೇಕು ಎಂದು ಕೇಂದ್ರ ಕೃಷಿ ಇಲಾಖೆ ದೃಢನಿಶ್ಚಯ ಮಾಡಿದೆ. 109 ಉತ್ತಮ ಬೀಜಗಳ ತಳಿಗಳನ್ನು ಕಂಡು ಹಿಡಿದಿದ್ದೇವೆ. ಕೃಷಿಯಲ್ಲಿ ತಾಂತ್ರಿಕ ಕ್ರಾಂತಿಯಾಗಬೇಕಾಗಿದೆ ಎಂದರು.

ಕೃಷಿ ಉತ್ಪಾದನೆಯ ವೆಚ್ಚವನ್ನು ಹೇಗೆ ಕಡಿಮೆ ಮಾಡಬೇಕು ಎಂಬುವುದರ ಬಗ್ಗೆ ಚಿಂತನೆ ನಡೆಸಲಾಗಿದೆ. ರಸಗೊಬ್ಬರಕ್ಕೆ ರೈತರಿಗೆ 2 ಲಕ್ಷ ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ನೀಡಿದ್ದೇವೆ. ಕರ್ನಾಟಕದಲ್ಲಿ ಬಿ.ಎಸ್.ವೈ. ಸರ್ಕಾರ ಇರುವಾಗ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದ 6 ಸಾವಿರ ಮತ್ತು ರಾಜ್ಯದ 4 ಸಾವಿರ ಸೇರಿ ರೈತರಿಗೆ 10 ಸಾವಿರ ರೂ. ನೀಡುತ್ತಿತ್ತು. ಈಗಿನ ಸರ್ಕಾರ ಅದನ್ನು ನಿಲ್ಲಿಸಿದೆ. ರಾಜ್ಯಕ್ಕೆ ನೀಡಿದ ಕೋಟ್ಯಾಂತರ ರೂ.ಗಳ ಕೃಷಿ ಅನುದಾನವನ್ನು ಖರ್ಚು ಮಾಡದೇ ಉಳಿಸಿಕೊಂಡಿದೆ. ಈ ಬಗ್ಗೆ ನಾನು ಇಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ತ್ವರಿತವಾಗಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು.

Also read: From Thyroid Cyst to Bronchogenic Cyst: A Surprising Test and A Radiological and Surgical Triumph!

ರೈತ ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ರೈತ ಬೆಳೆದ ಜಾಗದಲ್ಲಿ ಕಡಿಮೆ ಬೆಲೆ ಸಿಗುವುದರಿಂದ ಬೇಡಿಕೆ ಇರುವ ದೂರದ ಊರಿಗೆ ಮಾರಾಟ ಮಾಡಲು ಸಾಗಾಣಿಕೆ ವ್ಯವಸ್ಥೆಗೆ ಅರ್ಧದಷ್ಟು ಹಣವನ್ನು ಕೇಂದ್ರ ಸರ್ಕಾರ ನೀಡಲಿದ್ದು, ಇದರಿಂದ ರೈತನಿಗೆ ಹೆಚ್ಚಿನ ಬೆಲೆ ಸಿಗಲಿದೆ. ಗ್ರಾಹಕರಿಗು ದುಬಾರಿಯಾಗುವುದಿಲ್ಲ ಎಂದರು.

ಎಫ್‍ಪಿಓಗಳಿಂದ ದೇಶದಲ್ಲಿ ಕೃಷಿ ಕ್ಷೇತ್ರದಲ್ಲಿ ಸ್ಟಾಟ್‍ಅಪ್ ಕ್ರಾಂತಿಯಾಗಿದ್ದು, ಕರ್ನಾಟಕದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಎಫ್‍ಪಿಓಗಳು ಪ್ರಾರಂಭವಾಗಿದ್ದು, ಶಿವಮೊಗ್ಗದಿಂದಲೇ 60 ಕೋಟಿಯ ವ್ಯವಹಾರವಾಗಿದ್ದು, ಶೀಘ್ರದಲ್ಲೇ 100 ಕೋಟಿ ದಾಟಲಿರುವುದು ಸಂತೋಷತಂದಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಈ ಸಂಖ್ಯೆ ದಾಟಬೇಕು ಎಂಬುವುದೇ ಪ್ರಧಾನಿಯವರ ಉದ್ದೇಶವಾಗಿದ್ದು, ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದರು.

ಕೃಷಿ ಫಸಲುಗಳ ಅಭಿವೃದ್ಧಿ ಪಾರಂಪರಿಕ ಕೃಷಿಯ ಜೊತೆಗೆ ಆಧುನಿಕ ಕೃಷಿ ವಿಧಿ ವಿಧಾನಗಳನ್ನು ಅಳವಡಿಸಿ ಪಶುಪಾಲನೆ ಸೇರಿದಂತೆ ರೈತನಿಗೆ ಲಾಭವಾಗುವ ಎಲ್ಲಾ ರೀತಿಯ ಪದ್ಧತಿಗಳನ್ನು ಜೋಡಿಸಿ ರೈತನಿಗೆ ಆದಾಯ ಹೆಚ್ಚಳ ಮಾಡಲು ವಿವಿಧ ಕ್ರಮ ಕೈಗೊಳ್ಳಲಾಗುತ್ತಿದೆ. ವಿಶ್ವದ ಭೂಪಟದಲ್ಲಿ ಭಾರತ ಆರ್ಥಿಕತೆಯಲ್ಲಿ ಈಗ 5ನೇ ಸ್ಥಾನದಲ್ಲಿದ್ದು, ಮುಂಬರುವ ವರ್ಷಗಳಲ್ಲಿ 3ನೇ ಸ್ಥಾನಕ್ಕೆ ಬರಲಿದೆ. ಕೃಷಿ ಭೂಮಿಯನ್ನು ಉಳಿಸಲು ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡಿ, ಸಾವಯವ ಕೃಷಿಯೆಡೆಗೆ ರೈತ ಯೋಚಿಸಬೇಕಾಗಿದೆ. ಸಾವಯವ ಕೃಷಿಗೆ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ಪ್ರಧಾನ ಮಂತ್ರಿಗಳು ದೂರದೃಷಿ ಯೋಜನೆಯನ್ನು ರೂಪಿಸಿದ್ದು, ನಿಮ್ಮೆಲ್ಲರ ಸಹಯೋಗ ಬೇಕು ಎಂದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಸ್ಟಾಟ್‍ಅಪ್ ಪ್ರಯೋಗದಿಂದ ಹೆಚ್ಚಿನ ಅನುದಾನ ಸ್ವಯಂಉದ್ಯೋಗಿಗಳಿಗೆ ಹರಿದು ಬರಲಿದೆ. 9ನೇ ವರ್ಷಕ್ಕೆ ಸ್ಟಾಟ್‍ಅಪ್ ಯೋಜನೆ ಕಾಲೂರಿದ್ದು, ದೇಶದಲ್ಲಿ 1.60ಲಕ್ಷ ಹೊಸ ಸ್ಟಾಟ್‍ಅಪ್ ಕಂಪನಿಗಳು ಕಾರ್ಯಾಚರಿಸುತ್ತಿದೆ. ನಮ್ಮ ಶಿವಮೊಗ್ಗದ ಹಲವಾರು ಕಂಪನಿಗಳು ಉತ್ತಮ ಸಾಧನೆ ಮಾಡಿದೆ. ಕೃಷಿಕರಿಗೆ ಬೆನ್ನಲೆಬಾಗಿ ನಿಂತು ಸ್ವಯಂ ಉದ್ಯೋಗಿಗಳಾಗಲು ಎಫ್‍ಪಿಓ ಮುಖ್ಯ ಉದ್ದೇಶ ಹೊಂದಿದ್ದು, ರೈತರ ಲಾಭ ರೈತರೇ ಪಡೆದುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಇದಕ್ಕೂ ಮೊದಲು ಗಿಡ ನೆಟ್ಟು ಸ್ಟಾಟ್‍ಅಪ್ ಮಲೆನಾಡ್ ಸ್ಟಾರ್ಟ್ ಅಪ್ ಸಮಿಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿವಿಧ ಮಳಿಗೆಗಳನ್ನು ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದ ಪೂರ್ಯನಾಯ್ಕ್, ಡಾ.ಧನಂಜಯ ಸರ್ಜಿ, ಡಿ.ಎಸ್.ಅರುಣ್, ಮಾಜಿ ಶಾಸಕರಾದ ಎಸ್.ರುದ್ರೇಗೌಡ, ಕೆ.ಜಿ.ಕುಮಾರಸ್ವಾಮಿ, ಪ್ರಮುಖರಾದ ಟಿ.ಡಿ. ಮೇಘರಾಜ್, ಅನ್ವೇಷಣ್ ಪ್ರಮುಖರಾದ ಸುಭಾಶ್, ಸಿ.ಎಂ.ಪಾಟೀಲ್, ಭದ್ರೀಶ್, ನಾಗರಾಜ್ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಸ್ಟಾಟ್‍ಅಪ್ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: B S YadiyurappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnad Startup Summit ProgramMalnadNewsNews_in_KannadaNews_KannadaShimogaShivamoggaNewsShivrajSingh Chouhanಬಿ.ಎಸ್. ಯಡಿಯೂರಪ್ಪಮಲೆನಾಡು ಸ್ಟಾರ್ಟ್ ಅಪ್ ಸಮಿಟ್ ಕಾರ್ಯಕ್ರಮಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವರಾಜ್ ಸಿಂಗ್ ಚೌವ್ಹಾಣ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

From Thyroid Cyst to Bronchogenic Cyst: A Surprising Twist and A Radiological and Surgical Triumph!

Next Post

ಭದ್ರಾವತಿ | ಭೀಕರ ರಸ್ತೆ ಅಪಘಾತ | ವೈದ್ಯಕೀಯ ವಿದ್ಯಾರ್ಥಿನಿ ದಾರುಣ ಸಾವು

kalpa News

kalpa News

Next Post
ಭದ್ರಾವತಿ | ಭೀಕರ ರಸ್ತೆ ಅಪಘಾತ | ವೈದ್ಯಕೀಯ ವಿದ್ಯಾರ್ಥಿನಿ ದಾರುಣ ಸಾವು

ಭದ್ರಾವತಿ | ಭೀಕರ ರಸ್ತೆ ಅಪಘಾತ | ವೈದ್ಯಕೀಯ ವಿದ್ಯಾರ್ಥಿನಿ ದಾರುಣ ಸಾವು

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL