No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಧರ್ಮ, ದೇಶ ಸಂವಿಧಾನಕ್ಕೆ ಅಪಚಾರ: ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 31, 2025
in ಶಿವಮೊಗ್ಗ
0
ನನಗೊಂದು ನ್ಯಾಯ ಪ್ರಿಯಾಂಕ್ ಗೆ ಒಂದು ನ್ಯಾಯಾನಾ? ಈಶ್ವರಪ್ಪ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯದ ಕಾಂಗ್ರೆಸ್ ಸರ್ಕಾರ ಧರ್ಮ, ದೇಶ ಸಂವಿಧಾನಕ್ಕೆ ಅಪಚಾರ ಮಾಡುತ್ತಿದೆ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹುಬ್ಬಳ್ಳಿ ಘಟನೆಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಘಟನೆಗೆ ಕಾರಣರಾದ ಮುಸ್ಲಿಂ ಗೂಂಡಾಗಳ ಮೇಲಿನ ಕೇಸ್ ಗಳನ್ನು ವಾಪಸ್ ತೆಗೆದುಕೊಳ್ಳಲಾಗಿತ್ತು. ಇದೀಗ ಹೈಕೋರ್ಟ್ ಈ ರೀತಿ ವಾಪಸ್ ತೆಗೆದುಕೊಂಡಿರುವ ಸಚಿವ ಸಂಪುಟದ ತೀರ್ಮಾನ ಸರಿಯಲ್ಲ ಎಂದು ಛೀಮಾರಿ ಹಾಕಿದೆ. ಇನ್ನಾದರೂ ಕಾಂಗ್ರೆಸ್ ಸರ್ಕಾರ ತನ್ನ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳದಿದ್ದರೆ ಜನರೇ ಸರ್ಕಾರದ ವಿರುದ್ಧ ದಂಗೆಯೇಳುವ ಕಾಲ ದೂರವಿಲ್ಲ ಎಂದರು.
ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ಪೊಲೀಸ್ ಅಧಿಕಾರಿಗಳ ಮೇಲೆಯೇ ಹಲ್ಲೆ ಮಾಡಿದಂತಹ ಮುಸ್ಲಿಂ ಗೂಂಡಾಗಳ ಪರ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡಿರುವುದೇ ತಪ್ಪು. ಸಚಿವ ಸಂಪುಟ ಸಭೆ ಎಂದರೆ ಮಕ್ಕಳು ಗೋಲಿ ಆಟವಾಡುವ ಜಾಗವಲ್ಲ. ಈಗ ಹೈಕೋರ್ಟ್ ಈ ತೀರ್ಮಾನದ ವಿರುದ್ಧ ಕಾಂಗ್ರೆಸ್ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದೆ. ಇದು ಮುಸ್ಲಿಂ ಗೂಂಡಾಗಳನ್ನು ರಕ್ಷಿಸುವ ತೀರ್ಮಾನವಾಗಿದೆ. ಅಲ್ಲದೇ, ಸಂವಿಧಾನಬಾಹಿರ ಕೂಡ. ಇನ್ನಾದರೂ ಕಾಂಗ್ರೆಸ್ ಸರ್ಕಾರ ಪಾಠ ಕಲಿಯಬೇಕು ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬ ಮುಸ್ಲಿಂ ಯುವಕನ ಕೊಲೆಯಾಗಿದೆ. ಇದು ತಪ್ಪು. ಇದನ್ನು ಯಾರೂ ಒಪ್ಪುವುದಿಲ್ಲ. ಆದರೆ, ಈ ಹಿಂದೆ ಹಿಂದೂಗಳ ಕೊಲೆಗಳು ನಡೆದವಲ್ಲ, ಆಗ ಹೋರಾಟ ಮಾಡಿದವರೆಲ್ಲ ಎಲ್ಲಿ ಹೋಗಿದ್ದರು? ಮುಸ್ಲಿಂ ಮುಖಂಡರು ಈಗ ತಾವು ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕವಾಗಿ ರಾಜೀನಾಮೆ ಕೊಡುತ್ತೇವೆ ಎಂದಮೇಲೆ ಸರ್ಕಾರಕ್ಕೆ ಬುದ್ದಿ ಬರುತ್ತದೆಯೇ? ಹಿಂದೂಗಳ ಹತ್ಯೆಯಾದಾಗ ಇವರೆಲ್ಲಾ ಎಲ್ಲಿ ಹೋಗಿದ್ದರು? ಇದೆಲ್ಲಾ ಬಹಳ ದಿನ ಉಳಿಯುವುದಿಲ್ಲ. ಕಾನೂನು ಸಚಿವರ ಹೇಳಿಕೆಗಳು ಕೂಡ ಬಾಲಿಶ ಹೇಳಿಕೆಯಾಗಿದೆ ಎಂದರು.
ರಾಜ್ಯ ಸರ್ಕಾರ ಈಗ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮುವಾದ ತಡೆಗೆ ವಿಶೇಷ ಪೊಲೀಸ್ ಪಡೆ ರಚಿಸುತ್ತಿದೆ. ಇದಕ್ಕಾಗಿ ನಕ್ಸಲ್ ನಿಗ್ರಹ ಪಡೆಯನ್ನು ನಿಯೋಜಿಸಲಾಗುತ್ತಿದೆ. ಬಿ.ಕೆ. ಹರಿಪ್ರಸಾದ್ ಅವರನ್ನು ದಕ್ಷಿಣ ಕನ್ನಡಕ್ಕೆ ಕಳಿಸುತ್ತಾರಂತೆ. ಅಲ್ಲಿನ ಪರಿಸ್ಥಿತಿ ಅರಿಯಲು ಅವರು ಮುಸ್ಲಿಂ ಪರ ಇರುವವರು. ತೋಳದ ಕೈಗೆ ಕುರಿಯನ್ನು ಕೊಟ್ಟ ಹಾಗೇ ಆಗುತ್ತದೆ ಅಷ್ಟೇ. ಕೋಮುವಾದಗಳು ಕಾಂಗ್ರೆಸ್ ಕಚೇರಿಗಳಿಂದಲೇ ಹುಟ್ಟುತ್ತವೆ ಎಂದರು.

ಶಿವಮೊಗ್ಗದಲ್ಲಿಯೂ ಕೂಡ ಮುಸ್ಲಿಂ ಗೂಂಡಾಗಳ ಹಾವಳಿ ಹೆಚ್ಚಾಗುತ್ತಿದೆ. ಇತ್ತೀಚೆಗೆ ಹಿಂದೂ ವ್ಯಕ್ತಿಯ ಮೇಲೆ ಹಲ್ಲೆ ಮಾಡಲಾಗಿದೆ. ಇದು ತೀರಾ ಅತಿಯಾದ ನಡವಳಿಕೆ. ಹಲ್ಲೆಗೊಳಗಾದ ವ್ಯಕ್ತಿಯ ಪತ್ನಿಯನ್ನು ಚುಡಾಯಿಸುತ್ತಿದ್ದರು ಎಂಬ ಕಾರಣಕ್ಕೆ ಚುಡಾಯಿಸುತ್ತಿದ್ದವರಿಗೆ ಬುದ್ಧಿ ಮಾತು ಹೇಳಿದ್ದಕ್ಕೆ ಈ ಹಲ್ಲೆ ನಡೆದಿದೆ. ಇಂತಹ ಹಲ್ಲೆಗಳು ಸರ್ಕಾರದ ಗಮನಕ್ಕೆ ಬರುವುದಿಲ್ಲವೇ? ಪೊಲೀಸರು ಏನು ಮಾಡುತ್ತಾರೆ? ಸರ್ಕಾರವೇ ಮುಸ್ಲಿಮರ ಪರವಾಗಿರುವಾಗ ಕ್ರಮ ಹೇಗೆ ತೆಗೆದುಕೊಳ್ಳುತ್ತಾರೆ? ಕೂಡಲೇ ಹಲ್ಲೆ ಮಾಡಿದ ಎಲ್ಲಾ ವ್ಯಕ್ತಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರದಲ್ಲಿ ಈಗ ಗೊಂದಲಗಳು ಆರಂಭವಾಗಿವೆ. ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಹಾಗೂ ಡಿಸಿಎಂ ಮಧ್ಯೆ ಭಿನ್ನಾಭಿಪ್ರಾಯಗಳು ಬಯಲಾಗಿವೆ. ಇದು ಕಾಂಗ್ರೆಸ್ ಪತನದ ಪ್ರಥಮ ಹೆಜ್ಜೆಯಾಗಿದೆ. ಅಧಿಕಾರಿಗಳ ವರ್ಗಾಣೆ ಸಿಎಂ ಅವರದೇ ಪರಮಾಧಿಕಾರ ಎನ್ನುವುದನ್ನು ಡಿಸಿಎಂ ಪ್ರಶ್ನೆ ಮಾಡಿದ್ದಾರೆ. ಇವರು ಮುಖ್ಯಮಂತ್ರಿ ಆಗುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ, ಆಗಲೂ ಕೂಡ ಇದೇ ಮಾತನ್ನು ಹೇಳುತ್ತಾರಾ ಎಂದು ಪ್ರಶ್ನಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮೋಹನ್ ಕುಮಾರ್ ಜಾಧವ್, ಲಕ್ಷ್ಮಿ ಶಂಕರನಾಯ್ಕ್, ಆರತಿ ಆ.ಮ. ಪ್ರಕಾಶ್, ಮಹೇಶ್ ಕುಮಾರ್, ಶಂಕರ್, ಕುಬೇರಪ್ಪ, ಸಕ್ರಾನಾಯ್ಕ್, ಮುಂತಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: K S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಂಬಾಕು ತಿಂದು ಸಿಕ್ಕ ಸಿಕ್ಕಲ್ಲಿ ಉಗಿದ್ರೆ ಇನ್ಮುಂದೆ ಬೀಳುತ್ತೆ ದಂಡ | ಹುಕ್ಕಾ ಬಳಸಿದರೇ ಲಕ್ಷ ರೂ. ದಂಡ

Next Post

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್'ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL