ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ಕರ್ನಾಟಕ ರಾಜ್ಯದ ಜನರನ್ನ ದಿಕ್ಕು ತಪ್ಪಿಸುವ ಕಾರ್ಯತಂತ್ರ ರೂಪಿಸಲು ಆರ್ ಎಸ್ ಎಸ್ ಸಂಘಟನೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದು ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್ ಹೇಳಿದ್ದಾರೆ.
ನಿರಂತರವಾಗಿ ಕೇಳಿ ಬರುತ್ತಿರುವ ಅಧಿಕಾರ ಹಂಚಿಕೆ, ಮುಖ್ಯಮಂತ್ರಿಯ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ, ಸಚಿವರ ರಾಜೀನಾಮೆ, ಕ್ಷೇತ್ರ ಅಭಿವೃದ್ಧಿಗೆ ಮತ್ತು ಶಾಸಕರ ನಿಧಿಗೆ ಯಾವುದೇ ಅನುದಾನ ನೀಡದೆ ಹಾಗೂ ಇತ್ತೀಚೆಗೆ ನಡೆಯುತ್ತಿರುವ ಜಾತಿ ಸಮೀಕ್ಷೆಯಲ್ಲಿ ಅತಿಹೆಚ್ಚಿನ ತೊಡಕುಗಳು ಹೀಗೆ ನಿರಂತರ ಸರ್ಕಾರದ ಎಡವಟ್ಟುಗಳನ್ನು ಮರೆಮಾಚಲು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದಿದ್ದಾರೆ.

ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ರಾಜಕೀಯವನ್ನು ಹೊರತುಪಡಿಸಿ ನಿಷ್ಪಕ್ಷಪಾತವಾಗಿ ತಾಳುವುದು ಅಗತ್ಯವೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ ಎಸ್ ಅರುಣ್ ಅವರು ಬಹಿರಂಗ ಪತ್ರ ಮುಖೇನ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 












Discussion about this post