ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಸಿನಿಮೊಗೆ – ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ ಇದೀಗ ರಾಜ್ಯ ಮಟ್ಟದ ಅಂಬೆಗಾಲು – 6 #Ambegalu-6 ಕಿರು ಚಿತ್ರ (ಶಾರ್ಟ್ ಫಿಲಂ) ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಜು.31ರವರೆಗೆ ಅವಕಾಶವನ್ನು ವಿಸ್ತರಿಸಲಾಗಿದೆ ಎಂದು ಬೆಳ್ಳಿಮಂಡಲದ ಕಾರ್ಯಧ್ಯಕ್ಷರು ಹಾಗೂ ಅಂಬೆಗಾಲು ಕಿರುಚಿತ್ರ ಸ್ಪರ್ಧೆಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ತಿಳಿಸಿದರು.
ಈ ಸಂಬಂಧವಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ ವಿವಿಧೆಡೆಗಳಿಂದ ದಿನಾಂಕ ವಿಸ್ತರಣೆಗೆ ಮನವಿ ಬಂದಿದ್ದು, ಕಿರುಚಿತ್ರ ನಿರ್ಮಾಪಕರು, ನಿರ್ದೇಶಕರ ಆಶಯದಂತೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಜು. 31ರವರೆಗೆ ವಿಸ್ತರಿಸಲಾಗಿದೆ. ಸಿದ್ಧಪಡಿಸಿದ ಕಿರುಚಿತ್ರಗಳನ್ನು ಆ.30ರ ಒಳಗಾಗಿ ಸಲ್ಲಿಸುವಂತೆ ಮನವಿ ಮಾಡಿದರು.

Also read: ರಮಣೀಯತೆ ಪಡೆದುಕೊಂಡ ಮಲೆನಾಡಿನ ಮಳೆ | ಶಿವಮೊಗ್ಗ, ಶೃಂಗೇರಿಯಲ್ಲಿ ಹೇಗಿದೆ?
ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರು, ಕಲಾವಿದರು ತೀರ್ಪುಗಾರರಾಗಿ ಪಾಲ್ಗೊಳ್ಳಲಿದ್ದು, ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ರೂ. 50,000 ರೂ.ಗಳ ಪ್ರಥಮ ಬಹುಮಾನ, ರೂ. 30,000 ರೂ.ಗಳ ದ್ವಿತೀಯ ಬಹುಮಾನ ಜೊತೆಗೆ ಶ್ರೇಷ್ಟ ನಟ, ಶ್ರೇಷ್ಟ ನಟಿ, ಶ್ರೇಷ್ಟ ನಿರ್ದೇಶಕ, ಶ್ರೇಷ್ಟ ಕಥೆ-ಚಿತ್ರಕಥೆ, ಶ್ರೇಷ್ಟ ಛಾಯಾಗ್ರಹಣ, ಶ್ರೇಷ್ಟ ಸಂಗೀತ, ಶ್ರೇಷ್ಟ ಸಂಗೀತ ವಿಭಾಗಗಳಲ್ಲಿ ಹತ್ತು ಮಂದಿಗೆ ತಲಾ 5,000 ನಗದು ಆಕರ್ಷಣೀಯ ಸ್ಮರಣಿಕೆಗಳಿವೆ. ಪ್ರಶಸ್ತಿ ಪುರಸ್ಕೃತರಿಗೆ ಅಕ್ಟೋಬರ್ ಮಾಸಾಂತ್ಯದಲ್ಲಿ, ನಡೆಯುವ ವರ್ಣರಂಜಿತ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post