ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ವಿಭಾಗದಿಂದ ನಡೆಸಿದ ರಾಜ್ಯಮಟ್ಟದ ಸಮ್ಮೇಳನದಲ್ಲಿ ಶಿವಮೊಗ್ಗದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿಗಳು ಹಲವು ಬಹುಮಾನ ಗಳಿಸಿದ್ದಾರೆ.
ದ್ವಿತೀಯ ವರ್ಷದ ಬಿ ಎಸ್ ಡಬ್ಲ್ಯೂ ವಿದ್ಯಾರ್ಥಿ ಮಧ್ವರಾಜ್ ಪೇಪರ್ ಪ್ರೆಸೆಂಟೇಷನ್ ನಲ್ಲಿ ಪ್ರಥಮ, ಅಂತಿಮ ವರ್ಷದ ಬಿಎ ವಿದ್ಯಾರ್ಥಿ ರಕ್ಷಿತ್ ಪೋಸ್ಟರ್ ಪ್ರೆಸೆಂಟೇಶನ್ ನಲ್ಲಿ ಪ್ರಥಮ, ಕಾಲೇಜಿನ ವಿದ್ಯಾರ್ಥಿಗಳ ತಂಡ ಗುಂಪು ಗಾಯನದಲ್ಲಿ ಪ್ರಥಮ ಮತ್ತು ಶಾರ್ಟ್ ಮೂವಿ ಮೇಕಿಂಗ್ ನಲ್ಲಿ ತೃತೀಯ ಬಹುಮಾನಗಳನ್ನು ಗಳಿಸಿದ್ದಾರೆ.
ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಕಾಲೇಜಿನ ಪ್ರಾಂಶುಪಾಲೆ ಡಾ. ಸಂಧ್ಯಾ ಕಾವೇರಿ, ಎಂಸಿಸಿಎಸ್ ನ ನಿರ್ದೇಶಕರಾದ ಡಾ.ರಾಜೇಂದ್ರ ಚೆನ್ನಿ, ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಡಾ. ಪ್ರೀತಿ ವಿ ಶಾನ್ ಭಾಗ್, ಮಾನಸ ಟ್ರಸ್ಟ್ ನ ನಿರ್ದೇಶಕರಾದ ಡಾ. ರಜನಿ ಎ ಪೈ ಹಾಗೂ ಕಾಲೇಜಿನ ಶಿಕ್ಷಕ ವೃಂದದವರು ಮತ್ತು ಎಲ್ಲಾ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















