ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು, ಜಿಲ್ಲಾ ಘಟಕ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏ.25ರಂದು ನಡುಹಗಲು 12ಗಂಟೆಗೆ ವಿನಾಯಕ ನಗರದ ನವ್ಯಶ್ರೀ ಸಭಾಂಗಣದಲ್ಲಿ ಅಂಬೇಡ್ಕರ್ Ambekar ಕುರಿತಂತೆ ರಾಜ್ಯಮಟ್ಟದ ಮಹಾ ನಾಯಕ ಕವಿಗೋಷ್ಠಿ ಮತ್ತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷೆ ಡಾ.ಹೆಚ್.ಕೆ. ಹಸೀನಾ ತಿಳಿಸಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯಾಧ್ಯಕ್ಷ ಕೋಟ್ರೇಶ್ ಎಸ್. ಉಪ್ಪಾರ್ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ, ಗೌರವಾಧ್ಯಕ್ಷ ಡಾ.ಕೆ.ಜಿ.ವೆಂಕಟೇಶ್, ಹಿರಿಯ ಪತ್ರಕರ್ತ ಆರುಂಡಿ ಶ್ರೀನಿವಾಸ ಮೂರ್ತಿ ಉಪಸ್ಥಿತರಿರುವರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
