ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೈಸೂರಿನಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ #Shivamogga Roller Skating Association ಕ್ರೀಡಾಪಟು ಸೈಯದ್ ಪೈಜಲ್ ಇಂದು ಸ್ಪೀಡ್ ರಿಲೇಯಲ್ಲಿ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ಶಿವಮೊಗ್ಗ ಜಿಲ್ಲೆಗೆ ಹಾಗೂ ಸ್ಕೇಟಿಂಗ್ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಸೈಯದ್ ಪೈಜಲ್ ಶಿವಮೊಗ್ಗದ ಸೈಯದ್ ಜುಲ್ಪಿಕರ್ ಹಾಗೂ ನಾಜೀಮಾ ದಂಪತಿಗಳ ಪುತ್ರ. ಈತ ಲಕ್ಷ್ಯ ಶಾಲೆ ವಿದ್ಯಾರ್ಥಿ.
Also read: ಮಾಚೇನಹಳ್ಳಿ ಇಂಡಸ್ಟ್ರೀಸ್ ಅಸೋಸಿಯೇಷನ್’ಗೆ ನೂತನ ಪದಾಧಿಕಾರಿಗಳ ಆಯ್ಕೆ
ರಾಷ್ಟ್ರಮಟ್ಟದ ಸ್ಪೀಡ್ ಸ್ಕೇಟಿಂಗ್ ಪಂದ್ಯದಲ್ಲಿ ಅನ್ಯ ರಾಜ್ಯದ 20ಕ್ಕೂ ಹೆಚ್ಚು ಕ್ರೀಡಾಪಟುಗಳನ್ನು ಮೆಟ್ಟಿ ಗುರಿ ತಲುಪುವ ಮೂಲಕ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾನೆ.
ವಿಜೇತ ಕ್ರೀಡಾಪಟುವಿಗೆ ಸಂಸದರಾದ ಬಿ.ವೈ. ರಾಘವೇಂದ್ರ, ಸಂಸ್ಥೆಯ ಅಧ್ಯಕ್ಷ ಮೋಹನ್ ಕುಮಾರ್ ಹಾಗೂ ಕಾರ್ಯದರ್ಶಿ ಎಂ ರವಿ ಕೋಚರ್ ಗಳಾದ ವಿಶ್ವಾಸ್ ಹಾಗೂ ಅತೀಶ್ ಮತ್ತು ಸಂಸ್ಥೆಯ ಪದಾಧಿಕಾರಿಗಳು ಅವರು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post