ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು 2023ರ ಜನವರಿ 7, 8 ಮತ್ತು 9ರಂದು ನಗರದ ಕುವೆಂಪು ರಂಗಮಂದಿರದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಹೇಳಿದರು.
ಈ ಸಂಬಂಧ ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರತಿಭಾ ಕಾರಂಜಿಯ ಲಾಂಛನ ಹಾಗೂ ಜಾಲತಾಣ ಲೋಕಾರ್ಪಣೆಗೊಳಿಸಿ ಮಾಧ್ಯಮದ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಕಲೆಗಳನ್ನು ಉತ್ತೇಜಿಸುವ, ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ, ಸೃಜನಾತ್ಮಕ ಕೌಶಲ್ಯಗಳನ್ನು ಹೊರತರಲು ಇದೊಂದು ಉತ್ತಮ ವೇದಿಕೆ ಇದಾಗಿರಲಿದೆ ಎಂದರು.

ಪ್ರತಿಭಾ ಕಾರಂಜಿಯ ಉದ್ಘಾಟನಾ ಕಾರ್ಯಕ್ರಮವು ಜನವರಿ 7ರಂದು ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ. ಉಳಿದಂತೆ ಪ್ರತಿಭಾಕಾರಂಜಿಯ ಏಕರೀತಿಯ ಸಾಂಸ್ಕøತಿಕ ಸ್ಪರ್ಧೆಗಳು ಡಿ.ವಿ.ಎಸ್.ಕಾಲೇಜಿನ ವಿವಿಧ ಕೊಠಡಿಗಳಲ್ಲಿ ನಡೆಯಲಿವೆ ಎಂದರು.

Also read: ಮಧ್ಯಾಹ್ನದ ವರದಿ – ಡಿ.16ರವರೆಗೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ
ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಥಮ ಸ್ಥಾನ ರೂ.6,000, ದ್ವಿತೀಯ ಸ್ಥಾನ ರೂ.4,000 ಹಾಗೂ ತೃತೀಯ ಸ್ಥಾನ 2,000ರೂ.ಗಳ ನಗದು ಪುರಸ್ಕಾರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು. ಆಗಮಿಸಿದ ಕ್ರೀಡಾಪಟುಗಳಿಗೆ ಉತ್ತಮ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದ್ದು, ನಗರದಲ್ಲಿ ಸುಮಾರು 13ಸ್ಥಳಗಳನ್ನು ಗುರುತಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ. ಪ್ರಕಾಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ, ಲೋಕೇಶ್ವರಪ್ಪ, ರಾಮಪ್ಪಗೌಡ ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.











Discussion about this post