ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನತೆಯನ್ನು ತಲುಪಿದ್ದು, ಈ ನಡುವೆ ಪೋಲಿಸರ ಮುಂದೆಯೇ ಕತ್ತಿ, ಮಚ್ಚು, ಲಾಂಗ್ ಹಿಡಿದ ಜನತೆ ಹಿಡಿದು ನಿಂತಿರುವುದು ಆತಂಕಕ್ಕೆ ಕಾರಣವಾಗಿದ್ದು, ಈ ನಡುವೆ ಗಲಾಟೆಯಲ್ಲಿ ಓರ್ವ ಮಹಿಳೆಗೆ ಗಾಯವಾಗಿದೆ ಅಂತ ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ.
ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ #Bajarangadal activist Harsha murder ನಂತ್ರ, ಇಂದು ಮೆಗ್ಗಾನ್ ನಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ, ಕುಟುಂಬಸ್ಥರಿಗೆ ಹರ್ಷ ಫಾರ್ಥೀವ ಶರೀರವನ್ನು ಹಸ್ತಾಂತರಿಸಲಾಗಿತ್ತು. ಮೆಗ್ಗಾನ್ ಆಸ್ಪತ್ರೆಯಿಂದ ಹರ್ಷ ಮನೆ ಇರುವಂತ ಬಸವನ ಬೀದಿಯವರೆಗೆ ಮೆರವಣಿಗೆಯಲ್ಲಿ ಮೃತದೇಹವನ್ನು ಕೊಂಡೊಯ್ಯಲಾಗುತ್ತಿತ್ತು.
ಈ ಸಂದರ್ಭದಲ್ಲಿ ಮೆರವಣಿಗೆ ವೇಳೆಯಲ್ಲಿ ಎನ್ ಟಿ ರಸ್ತೆಯಲ್ಲಿ ಸಿಕ್ಕ ಸಿಕ್ಕ ಮನೆಗಳು, ವಾಹನಗಳ ಮೇಲೆ ರೊಚ್ಚಿಗೆದ್ದಂತ ವಿವಿಧ ಗುಂಪುಗಳು ಕಲ್ಲು ತೂರಾಟ ನಡೆಸಿರೋದಾಗಿ ತಿಳಿದು ಬಂದಿದೆ. ಇದಷ್ಟೇ ಅಲ್ಲದೇ ಉದ್ರಿಕ್ತ ಗುಂಪುಗಳಿಂದ ಬೈಕ್ ಗಳಿಗೆ ಬೆಂಕಿ ಕೂಡ ಹಚ್ಚಿದ್ದಾರೆ ಎನ್ನಲಾಗಿದೆ. ಜೊತೆಗೆ ಮೆರವಣಿಗೆ ಸಾಗುತ್ತಿದ್ದಂತ ರಸ್ತೆಗಳಲ್ಲಿ ನಿಲ್ಲಿಸಿದ್ದಂತ ಕಾರುಗಳ ಗ್ಲಾಸ್ ಗಳನ್ನು ಪುಡಿ ಪುಡಿ ಮಾಡಿದ್ದಾರೆ ಎನ್ನಲಾಗಿದೆ. ಈ ಮೂಲಕ ನಗರದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಕೂಡ ನಡೆಸಿದ್ದಾರೆ ಎನ್ನಲಾಗುತ್ತಿದೆ.
Also read: ಹರ್ಷ ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ವಶಕ್ಕೆ : ಎಡಿಜಿಪಿ ಮುರುಗನ್ ಹೇಳಿಕೆ
ಮತ್ತೊಂದೆಡೆ ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತನ ಹತ್ಯೆ ಪ್ರಕರಣದಲ್ಲಿ ಚಿಕ್ಕಮಗಳೂರಿನ ಕಡೂರು ತಾಲೂಕಿನ ಬಳ್ಳಾರಿ ಕ್ಯಾಂಪ್ ನಲ್ಲಿ ಓರ್ವ ಆರೋಪಿ, ಬೆಂಗಳೂರಿನ ಜೆಜೆ ನಗರದಲ್ಲಿ ಮೂವರು ಆರೋಪಿ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post