ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಯನ್ನು ತಡೆಯಲು ತಹಶೀಲ್ದಾರ್‍ಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ DC Selvamani ಅವರು ಸೂಚನೆ ನೀಡಿದರು.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.

Also read: ಸಂಪಾಜೆ, ಚೆಂಬು ಗ್ರಾಪಂ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಜೆ.ಸಿ. ಮಾಧುಸ್ವಾಮಿ ಭೇಟಿ
ಹೊಸನಗರ ತಾಲೂಕಿನ ಈಚಲಕೊಪ್ಪ, ಬಾವಿಕೊಪ್ಪ, ಮುಳುಗಡ್ಡೆ ಇತ್ಯಾದಿ ಮತ್ತು ಸಾಗರ ತಾಲೂಕಿನ ಕಾರ್ಗಲ್ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಮೋಟಾರ್ ಬೋಟ್ ಬಳಸಿ ಅಕ್ರಮ ಮರಳುಗಾರಿಕೆ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇದನ್ನು ತಡೆಗಟ್ಟಲು ಪೊಲೀಸರನ್ನು ಒಳಗೊಂಡ ವಿಶೇಷ ಸ್ಕ್ಯಾಡ್ ರಚಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸಲು 5ಮರಳು ಬ್ಲಾಕ್‍ಗಳನ್ನು ಮಂಜೂರು ಮಾಡಲಾಗಿದೆ. ಈ ಬ್ಲಾಕ್‍ಗಳನ್ನು ಪಡೆದುಕೊಂಡಿರುವ ಇಲಾಖೆಗಳು, ಯಾವ ಸರ್ಕಾರಿ ಕಾಮಗಾರಿಗೆ ಎಷ್ಟು ಮರಳು ಪಡೆದುಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒದಗಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಎಎಸ್ಪಿ ಡಾ.ವಿಕ್ರಮ್ ಅಮಟೆ, ಡಿಎಫ್‍ಒ ಶಿವಶಂಕರ್, ಹಿರಿಯ ಭೂ ವಿಜ್ಞಾನಿ ವಿಂಧ್ಯಾ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.










Discussion about this post