ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಈ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಗೊಂದಲ, ಗಲಭೆ ಸ್ಥಷ್ಟಿಸುತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮರ ಪುತ್ಥಳಿ ವಿರೂಪಗೊಳಿಸಿರುವುದು ಅತ್ಯಂತ ವಿಷಾದಕರ ಸಂಗತಿಯಾಗಿದ್ದು, ಇಂತಹ ದುಷ್ಕೃತ್ಯ ನಡೆಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು. ವಿಧಾನಮಂಡಲದಲ್ಲೂ ಚರ್ಚಿಸಿ ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದು, ಈ ಘಟನೆಯಲ್ಲಿ ಭಾಗಿಯಾದ 23 ಜನರನ್ನು ಬಂಧಿಸಲಾಗಿದೆ. ಇನ್ನುಳಿದವರ ಮೇಲೂ ಕಾನೂನು ಕ್ರಮ ಜರುಗಿಸಲಾಗುವುದು ಹಾಗೂ ಅಪರಾಧಿಗಳು ಯಾರೇ ಇದ್ದರೂ ಶಿಸ್ತಿನ ಕ್ರಮ ಕೈಗೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮತ್ತೆ ಹಿರಿಯರಿಗೆ ಅವಕಾಶ ನೀಡಲಾಗುವುದು ಎನ್ನುವ ಪತ್ರಕರ್ತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಬಿಎಸ್‌ವೈ ಇದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಮುಖ್ಯಮಂತ್ರಿ ಅವರನ್ನೇ ಕೇಳಬೇಕು ಹಾಗೂ ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡುವ ಬಗ್ಗೆಯೂ ಯಾವುದೇ ಚರ್ಚೆ ನಡೆದಿಲ್ಲ. ಇದರು ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಅವರಿಗೆ ಬಿಟ್ಟ ವಿಚಾರ ಎಂದರು.
ಮತಾಂತರ ಕಾಯ್ದೆ ವಿಚಾರದಲ್ಲಿ ನಮಗೆ ನೂರಕ್ಕೆ ನೂರು ಬಹುಮತ ಸಿಗುತ್ತದೆ. ಹಾಗೂ ಕಾಯ್ದೆಯನ್ನು ಜಾರಿಗೆ ತಂದೇ ತರುತ್ತೇವೆ ಮತ್ತು ಅದರ ಅಗತ್ಯವಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post