No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹುಟ್ಟಿ ಬೆಳೆದ ಸಮಾಜಕ್ಕೆ ತೃಣಮಾತ್ರ ಕೊಡುಗೆ ನೀಡಲು ಶ್ರಮಿಸಿ: ಪರಮಶೇಖರ್ ಕರೆ

ಪಿಇಎಸ್‌ಐಟಿಎಂ ನಲ್ಲಿ ರಾಷ್ಟ್ರೀಯ ಇಂಜಿನಿಯರ್ಸ್ ಡೇ ಕಾರ್ಯಕ್ರಮ

kalpa News by kalpa News
September 15, 2023
in ಶಿವಮೊಗ್ಗ
0
ಹುಟ್ಟಿ ಬೆಳೆದ ಸಮಾಜಕ್ಕೆ ತೃಣಮಾತ್ರ ಕೊಡುಗೆ ನೀಡಲು ಶ್ರಮಿಸಿ: ಪರಮಶೇಖರ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ವಿಶ್ವೇಶ್ವರಯ್ಯನವರ ತಾಂತ್ರಿಕ ಕೌಶಲ್ಯತೆ, ಪ್ರಾಯೋಗಿಕ ಕಾರ್ಯ ತತ್ಪರತೆ ಹಾಗೂ ಸಮಾಜಮುಖಿ ಗುಣಗಳನ್ನು ಸರಿಯಾದ ರೀತಿಯಲ್ಲಿ ವಿಶ್ಲೇಷಿಸಿ ತನ್ಮೂಲಕ ತಾವು ಹುಟ್ಟಿ ಬೆಳೆದ ಸಮಾಜಕ್ಕೆ ತೃಣಮಾತ್ರದ ಕೊಡುಗೆಗಳನ್ನು ನೀಡುವಲ್ಲಿ ಶ್ರಮಿಸಬೇಕು ಎಂದು ಶಿವಮೊಗ್ಗ ಈಶ್ವರ್ ಸ್ಟೀಲ್ ಟೆಕ್ ಪ್ರೈವೇಟ್ ಕಂಪೆನಿಯ ಮಾಲೀಕರಾದ ಟಿ.ಎನ್. ಪರಮಶೇಖರ್ ಕರೆ ನೀಡಿದರು.

ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ PESITM ಕಾಲೇಜಿನಲ್ಲಿ ಮೆಕ್ಯಾನಿಕಲ್ ವಿಭಾಗದ ವತಿಯಿಂದ ಇಂದು ಜರುಗಿದ ರಾಷ್ಟ್ರೀಯ ಇಂಜಿನಿಯರ್ಸ್ ಡೇ Engineers Day ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿ ವೃಂದವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಧ್ಯೇಯೋದ್ದೇಶಗಳಿಂದ ಕೂಡಿದ ಗುರಿಗಳನ್ನು ಮನಸ್ಸಿನಲ್ಲಿ ಕೇಂದ್ರೀಕರಿಸಿಕೊಂಡು ತನ್ಮೂಲಕ ಆ ಗುರಿಗಳನ್ನು ತಲುಪಲು ಅದ್ವಿತೀಯ ಪ್ರಯತ್ನಗಳನ್ನು ಪ್ರಖರವಾಗಿ ಮಾಡಬೇಕು. ಈ ಮೂಲಕ ಯಶಸ್ಸಿನ ಮೆಟ್ಟಿಲುಗಳನ್ನು ಏರುತ್ತಾ ತಾವು ಕಲಿತ ಶಿಕ್ಷಣ ಸಂಸ್ಥೆಗೆ ಹಾಗೂ ಪೋಷಕರಿಗೆ ಋಣಿಯಾಗುವಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು.

Also read: ಗಡಿಯಲ್ಲಿ ಗುಂಡಿನ ಚಕಮಕಿ | ಕರ್ನಲ್, ಮೇಜರ್ ಸೇರಿ ವೀರಸ್ವರ್ಗ ಸೇರಿದ ನಾಲ್ವರು ಯೋಧರು

ತಮ್ಮ ಹಾಗೂ ವಿಶ್ವೇಶ್ವರಯ್ಯನವರ ಕಾಲಘಟ್ಟದ ಹಲವಾರು ಉದಾಹರಣೆಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳ ಮನ ಮುಟ್ಟುವಂತೆ ಸೂಚ್ಯವಾಗಿ ವಿವರಿಸಿದ ಅವರು, ಇಂಜಿನಿಯರಿಂಗ್ ಪದವಿಯನ್ನು ಅಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ನಮ್ಮ ಭಾರತ ದೇಶದ ಅನ್ಹೂಯ ರತ್ನಗಳಲ್ಲಿ ಒಬ್ಬರಾದ ಎಂ. ವಿಶ್ವೇಶ್ವರಯ್ಯನವರ Sir M. Vishweshwaraiah ಒಟ್ಟಾರೆ ಸಾಧನೆಯ ಬಗ್ಗೆ ಹೆಮ್ಮೆಯನ್ನು ಹೊಂದಿರಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗುವಂತೆ ತಾವು ಕಲಿತ ತಾಂತ್ರಿಕ ವಿಷಯದಲ್ಲಿನ ಹಲವಾರು ಪ್ರಯೋಗಗಳ ಫಲಿತಾಂಶಗಳನ್ನು ಮಾರ್ಮಿಕವಾಗಿ ಅಳವಡಿಸಿಕೊಂಡು ಜೀವನ ಶೈಲಿಯು ಉತ್ತುಂಗದೆಡೆಗೆ ಒಯ್ಯುವಲ್ಲಿ ಪ್ರಯತ್ನಿಸಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ಭವಿಷ್ಯಕ್ಕಾಗಿ ರೂಪಿಸುವ ಗುರಿಗಳು, ಅವುಗಳನ್ನು ತಲುಪಲು ಬೇಕಾದ ಪ್ರಾಯೋಗಿಕ ಚಾಕಚಕ್ಯತೆಗಳು, ತಮ್ಮ ಸುತ್ತಮುತ್ತಲಿನ ಪ್ರಕೃತಿಯ ಜೊತೆಗೆ ಅಪರಿಮಿತ ಒಡನಾಟ ಮತ್ತು ಉತ್ತಮ ಗುಣಮಟ್ಟವುಳ್ಳ ಬೌದ್ಧಿಕ ಮನೋಸ್ಥಿತಿಯನ್ನು ವೃದ್ಧಿಸಿಕೊಳ್ಳುವಂತೆ ಪ್ರೇರೇಪಿಸಿದರು.

https://kalpa.news/wp-content/uploads/2023/05/Jain-Public-School-Advt-5.mp4

ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಸಾಧಿಸಬೇಕಾದ ಗುರಿಗಳು, ಆ ಗುರಿಗಳನ್ನು ತಲುಪಲು ಬೇಕಾದ ಪ್ರಾಯೋಗಿಕ ಕಾರ್ಯಕ್ಷಮತೆ ಮತ್ತು ಕಲಾಕೌಶಲ್ಯಗಳು, ತಮ್ಮ ಗುಣಮಟ್ಟವುಳ್ಳ ಪದಾರ್ಥಗಳ ಸೇವನೆ ಮತ್ತು ತನ್ಮೂಲಕ ಆರೋಗ್ಯ ಭರಿತ ಸಮಾಜ ನಿರ್ಮಾಣ ಮಾಡುವಲ್ಲಿ ಕಾರ್ಯಯೋನ್ಮುಖರಾಗಬೇಕೆಂದು ಸೂಚಿಸಿದರು.

ತಮ್ಮ ಸುತ್ತಮುತ್ತಲಿನ ಸಮಾಜದ ಹಾಗೂ ಪರಿಸರದ ಜೊತೆಗೆ ತಾರ್ಕಿಕ ನಂಟನ್ನು ಬೆಸೆದು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವಲ್ಲಿ ಶ್ರಮಿಸಬೇಕೆಂದು ವಿದ್ಯಾರ್ಥಿಗಳ ಮನಮುಟ್ಟುವಂತೆ ಹಲವು ಪ್ರಾಯೋಗಿಕ ಉದಾಹರಣೆಗಳನ್ನು ನೀಡುವ ಮೂಲಕ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ರಾಷ್ಟ್ರೀಯ ಇಂಜಿನಿಯರ್ಸ್ ಡೇ ಕಾರ್ಯಕ್ರಮದಲ್ಲಿ ಪಿಇಎಸ್ ಟ್ರಸ್ಟ್ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ಆರ್. ನಾಗರಾಜ, ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ವಿ. ಚೈತನ್ಯ ಕುಮಾರ್, ಪಿಇಎಸ್ ಸಮೂಹ ಸಂಸ್ಥೆಯ ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಲ್. ಗಿರೀಶ್ ಮುಖ್ಯ ಅತಿಥಿಗಳ ಕಿರು ಪರಿಚಯವನ್ನು ನೀಡುವುದರ ಮೂಲಕ ಸಭೀಕರನ್ನು ಸ್ವಾಗತಿಸಿದರು. ಪ್ರಥಮ ವರ್ಷದ ಇಂಜಿನಿಯರಿAಗ್ ವಿದ್ಯಾರ್ಥಿನಿ ಅನನ್ಯ ಪ್ರಾರ್ಥಿಸಿ, ಮೆಕಾನಿಕಲ್ ವಿಭಾಗದ ಬೋಧಕ ಸಿಬ್ಬಂದಿ ಡಾ. ಆರ್. ಅಶೋಕ್ ಬಣಗಾರ್ ವಂದಿಸಿದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಸಿ.ಪಿ. ಅಜೇಯ್ ನಿರೂಪಿಸಿದರು.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಡಿಯಲ್ಲಿ ಗುಂಡಿನ ಚಕಮಕಿ | ಕರ್ನಲ್, ಮೇಜರ್ ಸೇರಿ ವೀರಸ್ವರ್ಗ ಸೇರಿದ ನಾಲ್ವರು ಯೋಧರು

Next Post

ನ.4-5ರಂದು ವಿಐಎಸ್’ಎಲ್ ಶತಮಾನೋತ್ಸವ | ಪ್ರಧಾನಿ ಮೋದಿ ಅವರಿಗೆ ಆಹ್ವಾನ: ನಟ ದೊಡ್ಡಣ್ಣ

kalpa News

kalpa News

Next Post
ನ.4-5ರಂದು ವಿಐಎಸ್’ಎಲ್ ಶತಮಾನೋತ್ಸವ | ಪ್ರಧಾನಿ ಮೋದಿ ಅವರಿಗೆ ಆಹ್ವಾನ: ನಟ ದೊಡ್ಡಣ್ಣ

ನ.4-5ರಂದು ವಿಐಎಸ್'ಎಲ್ ಶತಮಾನೋತ್ಸವ | ಪ್ರಧಾನಿ ಮೋದಿ ಅವರಿಗೆ ಆಹ್ವಾನ: ನಟ ದೊಡ್ಡಣ್ಣ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL