ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ, ಇಲ್ಲಿ ಕೆಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಾಧ್ಯವಾಗಿಲ್ಲ. ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಹೇಳಿದರು.
ಸಾಗರ ವಿಧಾನಸಭಾ ಕ್ಷೇತ್ರದ ತುಮರಿ, ಬ್ಯಾಕೋಡು, ಎಸ್’ಎಸ್ ಭೋಗ್, ಹೆರಬೆಟ್ಟು, ಅರಳಗೋಡು, ಭಾನುಕುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಮಲೆನಾಡಿನ ಜನರ ಒಡಲ ಸಂಕಟವನ್ನು ಹತ್ತಿರದಿಂದ ಆಲಿಸುವ ಅವಕಾಶ ನನಗೆ ದೊರಕಿದೆ. ಇಲ್ಲಿನ ಸಮಸ್ಯೆಗಳ ಅಂತರಾಳ ಕೂಡ ಅರಿವಿಗೆ ಬಂದಿವೆ. ಇಲ್ಲಿ, ಕುಡಿಯುವ ನೀರು, ಬಗರ್ ಹುಕುಂ ಸಮಸ್ಯೆ, ಭೂ-ಹಕ್ಕು, ರಸ್ತೆ, ಸಾರಿಗೆ ಹೀಗೆ ಹತ್ತು ಹಲವು ಸಮಸ್ಯೆಗಳ ಬಗ್ಗೆ ಜನರು ಅಳಲು ತೋಡಿಕೊಂಡಿದ್ದಾರೆ. ಆದ್ದರಿಂದ, ಇಲ್ಲಿ ಜನರ ನಾಡಿ ಮಿಡಿತಕ್ಕೆ ಹತ್ತಿರವಾಗಿ ಮೂಲ ಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತೇನೆ ಎಂದರು.
Also read: ಬದಲಾವಣೆಗಾಗಿ ಗೀತಾಗೆ ಜನರ ಬೆಂಬಲ | ನಟ ಶಿವರಾಜಕುಮಾರ್ ಭರವಸೆ
ಕಳೆದ 15 ವರ್ಷದ ಆಡಳಿತದ ಅವಧಿಯಲ್ಲಿ ಕ್ಷೇತ್ರದ ಸ್ಥಿತಿ ಗತಿಯನ್ನೇ ಉನ್ನತ ಸ್ಥಾನಕ್ಕೆ ಏರಿಸಬಹುದಾಗಿತ್ತು. ಕೇಂದ್ರದ ಹಂತದಲ್ಲಿ ಅನೇಕ ಸಮಸ್ಯೆಗಳಿಗೆ ಇಲ್ಲಿ ಪರಿಹಾರ ಕಂಡುಕೊಳ್ಳಬಹುದಾಗುತ್ತು. ಆದರೂ, ಅದು ಸಾಧ್ಯವಾಗದಿರುವುದು ಆಶ್ಚರ್ಯ ಮೂಡಿಸುತ್ತದೆ ಎಂದರು.
ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಕ್ಷೇತ್ರದಲ್ಲಿ ರೈತರ ಕೃಷಿ ಚಟುವಟಿಕೆ ಸೇರಿದಂತೆ, ಕುಡಿಯುವ ನೀರಿನ ಸಮಸ್ಯೆ ವ್ಯತಿರಿಕ್ತ ಹಂತ ತಲುಪಿದೆ. ಮುಂದಿನ ದಿನದಲ್ಲಿ ಶರಾವತಿ ನದಿ ನೀರು ಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ಟೀಕಿಸುತ್ತಿದ್ದಾರೆ. ಇಲ್ಲಿ, ಬಿಪಿಪಿಯವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ. ಅದಕ್ಕೆ ಉತ್ತರವಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Shivarajkumar ಅವರಿಗೆ ಮತ ನೀಡಿ ಹರಸಬೇಕು ಎಂದರು.
ತುಮರಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಜಿ.ಟಿ. ಸತ್ಯನಾರಾಯಣ, ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಅಶೋಕ್ ಬೇಳೂರು, ಪ್ರಭಾವಾತಿ ಚಂದ್ರಕಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಓಂಕಾರ ಮುರಕ್ಕಿ, ಶ್ರೀದೇವಿ ರಾಮಚಂದ್ರ, ಪ್ರೇಮಾ ಸಂತೋಷ್, ರಘುಪತಿ ಹೋನಗೋಡು, ಸಂತೋಷ ಶೆಟ್ಟಿ, ಸುಧಾಕರ ಮಾವಿನಕೈ, ಆನಂದ ಬಾಳ, ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post