No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳ ಸಾಧನೆ ವಿದ್ಯಾಸಂಸ್ಥೆಯ ಮೌಲ್ಯ ಹೆಚ್ಚಿಸುತ್ತದೆ: ನಾರಾಯಣ ರಾವ್ ಅಭಿಪ್ರಾಯ

ಜೆ.ಎನ್.ಎನ್.ಸಿ.ಇ: ವಿವಿಧ ವಿಭಾಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಮಾರಂಭ

kalpa News by kalpa News
June 3, 2026
in ಶಿವಮೊಗ್ಗ
0
ವಿದ್ಯಾರ್ಥಿಗಳ ಸಾಧನೆ ವಿದ್ಯಾಸಂಸ್ಥೆಯ ಮೌಲ್ಯ ಹೆಚ್ಚಿಸುತ್ತದೆ: ನಾರಾಯಣ ರಾವ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ವಿದ್ಯಾರ್ಥಿಗಳ ಸಾಧನೆ ಎನ್ನುವುದು ವಿದ್ಯಾಸಂಸ್ಥೆಯ ಘನತೆ, ಶಿಸ್ತು ಮತ್ತು ಮೌಲ್ಯಗಳನ್ನು ಸಮಾಜದ ಮುಂದೆ ಪ್ರತಿಬಿಂಬಿಸುವ ಶಕ್ತಿಯಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು.

ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ JNNCE ಶುಕ್ರವಾರ ಸಂಜೆ ಏರ್ಪಡಿಸಿದ್ದ ವಿವಿಧ ಇಂಜಿನಿಯರಿಂಗ್, ಎಂಬಿಎ, ಎಂಸಿಎ ವಿಭಾಗಗಳಲ್ಲಿ, ವಿಟಿಯು ಪರೀಕ್ಷೆ ಹಾಗೂ ಎನ್‌ಪಿಟಿಇಎಲ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ಪರಿಶ್ರಮ, ಸಾಧನೆ ಮತ್ತು ವ್ಯಕ್ತಿತ್ವದ ಮೂಲಕ ಶಿಕ್ಷಣ ಸಂಸ್ಥೆಯ ಮೌಲ್ಯವನ್ನು ಹಾಗೂ ಸಮಾಜದ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸುತ್ತಾರೆ. ಪುರುಷನು ತನ್ನ ಸ್ವಪ್ರಯತ್ನದಿಂದ ದೊಡ್ಡವನಾಗಬಹುದು; ಆದರೆ ಹೆಣ್ಣು ಹುಟ್ಟಿದ ಕ್ಷಣದಿಂದಲೇ ಮಹಾನ್ ವ್ಯಕ್ತಿತ್ವವಾಗಿರುತ್ತಾಳೆ. ಈ ಮೂಲಕ ಹೆಣ್ಣಿನ ತ್ಯಾಗ, ಮಮತೆ ಮತ್ತು ಜೀವನ ನಿರ್ಮಾಣದ ಪಾತ್ರ ಅತ್ಯಂತ ದೊಡ್ಡದು.

ಬುದ್ಧಿಮತ್ತೆ ಮಾತ್ರ ಜೀವನದ ಪೂರ್ಣತೆಯನ್ನು ನೀಡುವುದಿಲ್ಲ. ಅದರೊಂದಿಗೆ ಮೌಲ್ಯಾಧಾರಿತ ಜೀವನ, ಸಂಸ್ಕಾರ ಮತ್ತು ವಿವೇಕ ಬೆಳೆಸಿಕೊಳ್ಳುವುದು ಅಗತ್ಯ. ಹಣ, ಅಧಿಕಾರ ಅಥವಾ ಖ್ಯಾತಿಗಿಂತ ಮೌಲ್ಯಗಳಿಗೆ ಹೆಚ್ಚಿನ ಮಹತ್ವ ನೀಡಬೇಕು.

Also read: ಮೋದಿ ಅವಧಿಯಲ್ಲಿ RBI ನಿಜಕ್ಕೂ ಚಿನ್ನ ಮಾರಿದೆಯೇ? ಇಲ್ಲಿದೆ PIB ಫ್ಯಾಕ್ಟ್ ಚೆಕ್ ವರದಿ

ಮಣ್ಣಿನ ಮಡಿಕೆಯನ್ನು ರೂಪಿಸುವ ಕುಂಬಾರನಿಗೆ ಅದರ ಬೆಲೆ ಗೊತ್ತಿರುವಂತೆ, ಕುಟುಂಬದ ಮೌಲ್ಯವನ್ನು ಸೃಷ್ಟಿಸುವವನಿಗೇ ಅದರ ನಿಜವಾದ ಅರ್ಥ ತಿಳಿಯುತ್ತದೆ.

ಇಂದಿನ ಯುವ ಸಮೂಹವು ಕೇವಲ ಜನರ ಮೆಚ್ಚುಗೆಗಾಗಿ ಬದುಕುವುದಕ್ಕಿಂತ, ತಮ್ಮ ತನವನ್ನು, ಸಂಸ್ಕಾರವನ್ನು ಮತ್ತು ವ್ಯಕ್ತಿತ್ವವನ್ನು ಉಳಿಸಿಕೊಳ್ಳುವತ್ತ ಕೇಂದ್ರಿಕರಿಸಲಿ. ಬೆಟ್ಟದಷ್ಟು ಬುದ್ಧಿಗಿಂತ, ಮುಷ್ಟಿಯಷ್ಟು ವಿವೇಕವೇ ಶ್ರೇಷ್ಟ ಎಂದು ಸಂದೇಶ ನೀಡಿದರು.
ಎನ್ಇಎಸ್ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಮಾತನಾಡಿ, ವಿದ್ಯಾರ್ಥಿಗಳು ಪದವಿ ಪಡೆದು ಶಿಕ್ಷಣ ಸಂಸ್ಥೆಯಿಂದ ಹೊರಡುವ ಸಂದರ್ಭದಲ್ಲಿ ಕೇವಲ ಅಂಕಗಳಿಕೆಯ ಬಗ್ಗೆ ಮಾತ್ರವಲ್ಲದೆ, ತಾವು ಗಳಿಸಿರುವ ನಿಜವಾದ ಜ್ಞಾನ, ಕೌಶಲ್ಯ ಹಾಗೂ ಜೀವನ ಮೌಲ್ಯಗಳ ಬಗ್ಗೆಯೂ ಆತ್ಮವಿಮರ್ಶೆ ಮಾಡಿಕೊಳ್ಳುವುದು ಅಗತ್ಯವಿದೆ.

ಈ ನಿಟ್ಟಿನಲ್ಲಿ ಪ್ರಯೋಗಶೀಲ ಕಲಿಕೆ ವಿದ್ಯಾರ್ಥಿಗಳ ಜ್ಞಾನ ವಿಕಸನಕ್ಕೆ ಪೂರಕವಾದ ಪರಿಣಾಮಕಾರಿ ವೇದಿಕೆಯಾಗಿದ್ದು, ಕಲಿತ ವಿಷಯಗಳನ್ನು ಪ್ರಾಯೋಗಿಕವಾಗಿ ಅರ್ಥೈಸಿಕೊಳ್ಳಲು ಹಾಗೂ ಹೊಸ ಆವಿಷ್ಕಾರಗಳತ್ತ ಹೆಜ್ಜೆ ಇಡಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ನಾವೀನ್ಯಪೂರ್ಣ ಯೋಜನೆಗಳನ್ನು ರೂಪಿಸಿ, ಅವುಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ತಮ್ಮ ವಿಷಯಾಧಾರಿತ ಜ್ಞಾನವನ್ನು ಪರೀಕ್ಷಿಸಿಕೊಳ್ಳಬಹುದು ಎಂದು ಹೇಳಿದರು.

ಎನ್‌ಪಿಟಿಇಎಲ್ ಸಾಧಕರಿಗೆ ವಿಶೇಷ ಬಹುಮಾನ

ಭಾರತ ಸರ್ಕಾರದ‌ ಅತ್ಯುನ್ನತ ಇ-ಕಲಿಕಾ ವೇದಿಕೆಯಾದ ಎನ್‌ಪಿಟಿಇಎಲ್ (National Programme on Technology Enhanced Learning) 2026 ನೇ ಸಾಲಿನ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಗೈದಿದ್ದಾರೆ.

ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಅನುರಾಧ.ಕೆ.ಎಂ ಜಾವಾ ಪ್ರೋಗ್ರಾಮ್ಮಿಂಗ್ ವಿಷಯದಲ್ಲಿ (ಶೇ.100%) ಅಂಕ ಪಡೆದಿದ್ದು, ರಾಷ್ಟ್ರಮಟ್ಟದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ವಿಭಾಗದ ಸ್ವಾತಿ.ಜಿ (ಶೇ.99%), ಇನ್ಫಾರ್ಮೇಶನ್ ಸೈನ್ಸ್ ವಿಭಾಗದ ಶುಭ್ರತಾ ಹೆಗ್ಡೆ (ಶೇ.98%), ಸಿರಿ.ಎನ್.ಎಸ್ (ಶೇ.98%) ಅಂಕ ಪಡೆದಿದ್ದಾರೆ.
ವಿದ್ಯಾರ್ಥಿಗಳಿಗೆ ಎನ್ಇಎಸ್ ಆಡಳಿತ ಮಂಡಳಿಯಿಂದ ವಿಶೇಷ ನಗದು ಬಹುಮಾನ ಘೋಷಿಸಲಾಯಿತು. ಎನ್‌ಪಿಟಿಇಎಲ್ ಮೂಲಕ ಆನ್‌ಲೈನ್ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮೋಚಿತ ಜ್ಞಾನ, ಪ್ರಮಾಣಪತ್ರದ ಜೊತೆಗೆ, ಉದ್ಯೋಗಾವಕಾಶಗಳ ವೃದ್ಧಿ ಹಾಗೂ ನಿರಂತರ ಕಲಿಕೆಯ ಅವಕಾಶ ದೊರೆಯುವುದು ಗಮನಾರ್ಹ.

ಕಾರ್ಯಕ್ರಮದಲ್ಲಿ ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಮಾತನಾಡಿದರು. ನಿರ್ದೇಶಕರಾದ ಟಿ.ಆರ್.ಅಶ್ವತ್ಥನಾರಾಯಣ ಶೆಟ್ಟಿ, ಎಚ್.ಸಿ.ಶಿವಕುಮಾರ್, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಕಾರ್ಯಕ್ರಮ ಸಂಯೋಜಕರಾದ ಡಾ.ಎಸ್.ಆರ್.ಅಶ್ವಿನಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: JNNCEKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋದಿ ಅವಧಿಯಲ್ಲಿ RBI ನಿಜಕ್ಕೂ ಚಿನ್ನ ಮಾರಿದೆಯೇ? ಇಲ್ಲಿದೆ PIB ಫ್ಯಾಕ್ಟ್ ಚೆಕ್ ವರದಿ

Next Post

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ

kalpa News

kalpa News

Next Post
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL