ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಈ ಬಾರಿಯ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿದ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ವಿನಯ್ ಜಿ. ಹೆಬ್ಬಾರ್ ಅವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ವಿನಯ್ ಹೆಬ್ಬಾರ್ ಪೂರ್ಣ ಅಂಕ ಗಳಿಸಿದ ಹಿನ್ನೆಲೆಯಲ್ಲಿ ಇಂದು ರಾಮಕೃಷ್ಣ ಶಾಲೆಗೆ ಆಗಮಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಆರ್. ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್, ಶಿಕ್ಷಣಾಧಿಕಾರಿ ರಾಮಪ್ಪ ಗೌಡ ಅವರು ಪ್ರತಿಭಾನ್ವಿತ ವಿದ್ಯಾರ್ಥಿಗೆ ಆತ್ಮೀಯವಾಗಿ ಸನ್ಮಾನಿಸಿದರು.
ವಿದ್ಯಾರ್ಥಿ ಹಾಗೂ ಪೋಷಕರಾದ ಗಣೇಶ್ ಹೆಬ್ಬಾರ್, ಜಿ. ವೇದಾವತಿ ಅವರನ್ನೂ ಸಹ ವಿದ್ಯಾಸಂಸ್ಥೆ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ರಾಮಕೃಷ್ಣ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ, ಮುಖ್ಯ ಶಿಕ್ಷಕರಾದ ಎಸ್.ಸಿ. ತೀರ್ಥೇಶ್, ಗಜೇಂದ್ರನಾಥ್, ಶೈಲಜಾ, ಕೆ.ಎಂ. ರಮೇಶ್, ವೆಂಕಟೇಶ್ ಇತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post