ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಿನ್ನೆ ಪ್ರಕಟಗೊಂಡ ಎಸ್’ಎಸ್’ಎಲ್’ಸಿ ಫಲಿತಾಂಶದಲ್ಲಿ ನಗರದ ಪ್ರಖ್ಯಾತ ರಾಮಕೃಷ್ಣ ವಿದ್ಯಾನಿಕೇತನ ಶಾಲೆ ವಿದ್ಯಾರ್ಥಿ ವಿನಯ್ ಜಿ. ಹೆಬ್ಬಾರ್ ಪೂರ್ಣ ಅಂಕ ಗಳಿಸುವ ಮೂಲಕ ಶಾಲೆ ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಗೋಪಾಳದಲ್ಲಿರುವ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾದ ವಿನಯ್ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿದ್ದು, ವಿದ್ಯಾಸಂಸ್ಥೆಯ ಗೌರವವನ್ನು ಹೆಚ್ಚಿಸಿದೆ.

ಈ ಪ್ರತಿಭಾನ್ವಿತ ವಿದ್ಯಾರ್ಥಿ ಗಣೇಶ್ ಹೆಬ್ಬಾರ್ ಹಾಗೂ ವೇದಾವತಿ ಅವರ ಸುಪುತ್ರ. ಈತನನ್ನು ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















