ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ಒಂದು ಸವಾಲಾಗಿದ್ದು, ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಆದ್ಯತೆ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಹೇಳಿದರು.
ಅವರು ಇಂದು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘ ಸ್ನೇಹ ಸ್ಪಂದನ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ “ಸುಶ್ರುತ ಆರೋಗ್ಯ ಕೇಂದ್ರ” ಉದ್ಘಾಟಿಸಿ ಮಾತನಾಡಿದರು.

ನಮ್ಮದು ಕೆಮಿಕಲ್ ಬಾಡಿ ಇದರಲ್ಲಿ ಪ್ಲಾಸ್ಟಿಕ್ ಅಂಶವಿದೆ. ಶ್ವಾಸಕೋಶದ ಕಾಯಿಲೆಗಳಿಗೆ ಹೆಚ್ಚು ಬಲಿಯಾಗುತ್ತಾರೆ. ಅನೇಕ ರೋಗಗಳು ನಮ್ಮನ್ನು ಕಾಡುತ್ತಲೇ ಇರುತ್ತವೆ. ಇದರಿಂದ ದೂರವಿರಬೇಕಾದರೆ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದರು.
Also read: ಬಿಗ್ ಶಾಕ್ | ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ | ಸಚಿವ ಸಂಪುಟ ಸಭೆ ಅನುಮೋದನೆ
ಆರೋಗ್ಯ ಕ್ಷೇತ್ರಕ್ಕೆ ಭಾರತೀಯರ ಕೊಡುಗೆ ಹೆಚ್ಚಾಗಿದೆ. ತಾಯಿ ಜನ್ಮ ಕೊಟ್ಟರೆ ವೈದ್ಯರು ಮರು ಜನ್ಮ ಕೊಡುತ್ತಾರೆ. ಅದರಲ್ಲೂ ಶೇ.70ರಷ್ಟು ಕಾಯಿಲೆಗಳು ಇಂದು ಕಲುಷಿತ ನೀರಿನಿಂದಲೇ ಬರುತ್ತವೆ. ವರ್ಷಕ್ಕೆ ದೇಶದಲ್ಲಿ ಸುಮಾರು 10 ಲಕ್ಷ ಮಕ್ಕಳು ಕಲುಷಿತ ನೀರಿನಿಂದಲೇ ಮರಣಹೊಂದುತ್ತಾರೆ ಎಂಬುವುದು ವಿಪರ್ಯಾಸವಾಗಿದೆ. ಇಂದು ಗಾಳಿಯು ಕೂಡ ಕಲುಷಿತಗೊಂಡಿದೆ. ಶೇ.40ರಷ್ಟು ಮಾತ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯವಿದ್ದು, ಇನ್ನೂ ಶೇ.60ರಷ್ಟು ಖಾಸಗಿ ಆಸ್ಪತ್ರೆಗಳಿವೆ ಎಂದರು.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಕಾಲೇಜಿನಲ್ಲಿ ಆಸ್ಪತ್ರೆ ತೆರೆದಿದ್ದು, ಪ್ರತಿ ಶುಕ್ರವಾರ ಸರ್ಜಿ ಆಸ್ಪತ್ರೆಯಿಂದ ವೈದ್ಯರು ಕಾಲೇಜಿನಲ್ಲಿ ಇರುತ್ತಾರೆ. ಮುಖ್ಯವಾಗಿ ವಿದ್ಯಾರ್ಥಿನಿಯರ ಆರೋಗ್ಯದ ದೃಷ್ಟಿಯನ್ನು ಇಟ್ಟುಕೊಂಡು ತಿಂಗಳಿಗೆ 2 ಬಾರಿ ಮಹಿಳಾ ವೈದ್ಯರು ಇಲ್ಲಿ ಲಭ್ಯವಿರುತ್ತಾರೆ. ಇನ್ನೆರಡು ವಾರ ಮಾನಸಿಕ ಆರೋಗ್ಯ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟಂತೆ ವೈದ್ಯರು ಬರುತ್ತಾರೆ. ನಮ್ಮ ಆಸ್ಪತ್ರೆಯ ಈ ಎಲ್ಲಾ ವೈದ್ಯರು ಈ ಕಾಲೇಜಿನಲ್ಲಿ ಉಚಿತ ಸೇವೆ ಸಲ್ಲಿಸುತ್ತಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಅವಿನಾಶ್ ಮಾತನಾಡಿ, ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಸರ್ಜಿ ಆಸ್ಪತ್ರೆಯ ವೈದ್ಯರು ನಮ್ಮ ಕಾಲೇಜಿನ ಕ್ಲಿನಿಕ್‍ಗೆ ಬಂದು ಉಚಿತ ಸೇವೆ ನೀಡುತ್ತಿರುವುದು ಸ್ವಾಗತರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಎಸ್.ಶ್ರೀಧರ್, ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಶಿವಮೂರ್ತಿ ಎ., ಪ್ರೊ. ಕೆ.ಎಸ್.ಸರಳ, ಡಾ.ಚಂದುಶ್ರೀ, ಡಾ.ಪ್ರಕಾಶ್ ಮರ್ಗನಳ್ಳಿ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post