ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾರ್ಥಿಗಳು ಶಿಸ್ತು, ದೇಶಪ್ರೇಮ ಮತ್ತು ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳುವಂತೆ ನಿವೃತ್ತ ಸೈನ್ಯಾಧಿಕಾರಿ ಮೋಹನ್ ಕರೆ ನೀಡಿದರು.
ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಜೈನ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ 79ನೇ ಸ್ವಾತಂತ್ರ್ಯೋತ್ಸವದ #Independence Day ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ದೇಶಸೇವೆಯ ಮಹತ್ವ ಹಾಗೂ ಸ್ವಾತಂತ್ರ್ಯ ಸಾದನೆಗೆ ಬಲಿದಾನ ಮಾಡಿದ ಹೋರಾಟಗಾರರ ತ್ಯಾಗವನ್ನು ನೆನಪಿಸಿದರು.
ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದ ಅಂತ್ಯದಲ್ಲಿ ಪ್ರಾಂಶುಪಾಲರು ಎಲ್ಲಾ ಅತಿಥಿಗಳು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮವು ಅತ್ಯಂತ ಶಿಸ್ತಿನಿಂದ ಮತ್ತು ಭಾವಪೂರ್ಣವಾಗಿ ನಡೆಯಿತು. ಇದು ವಿದ್ಯಾರ್ಥಿಗಳಿಗೆ ಧೈರ್ಯ, ಜವಾಬ್ದಾರಿ, ಮತ್ತು ಸೇವಾಭಾವವನ್ನು ಬೆಳೆಸುವ ಪ್ರಮುಖ ವೇದಿಕೆಯಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post