ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಜ್ಞಾನವೆಂದರೆ ಕೇವಲ ಪಠ್ಯಪುಸ್ತಕಗಳ ವಿಷಯವಲ್ಲ. ಅದು ನಮ್ಮ ದೈನಂದಿನ ಬದುಕಿನಲ್ಲಿ ಹಾಸುಹೊಕ್ಕಾಗಿದೆ. ನಿಮ್ಮಲ್ಲಿರುವ ಕುತೂಹಲವೇ ಬಹುದೊಡ್ಡ ಶಕ್ತಿ. ಪ್ರತಿಯೊಂದು ವಿಫಲತೆಯೂ ಕೂಡ ಯಶಸ್ಸಿನೆಡೆಗೆ ಒಂದು ಹೆಜ್ಜೆ. ಆದ್ದರಿಂದ ವಿದ್ಯಾರ್ಥಿಗಳು ಸಂಶೋಧನಾ ಮನೋಭಾವವನ್ನು ಬೆಳೆಸಿಕೊಂಡು ಉನ್ನತಮಟ್ಟದ ಸಾಧನೆ ಮಾಡಬೇಕು ಎಂದು ಪಿಇಎಸ್‌ಐಎಎಂಎಸ್ ಕಾಲೇಜಿನ ಪ್ರಾಂಶುಪಾಲ ಡಾ. ಸುದರ್ಶನ್ ತಿಳಿಸಿದರು.
ಪಿಇಎಸ್‌ಐಎಎಂಎಸ್ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ #National Science Day ಅಂಗವಾಗಿ ಆಯೋಜಿಸಿದ್ದ ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ನುಡಿದರು.
ಇಂದಿನ ಜಗತ್ತಿನಲ್ಲಿ ತಂತ್ರಜ್ಞಾನವು ಅತ್ಯಂತ ವೇಗವಾಗಿ ಅಭಿವೃದ್ಧಿಯಾಗುತ್ತಿದೆ. ಕೃತಕ ಬುದ್ಧಿಮತ್ತೆ, ಜೈವಿಕ ತಂತ್ರಜ್ಞಾನ, ಹಸಿರುಶಕ್ತಿ, ಅಂತರಿಕ್ಷ ಸಂಶೋಧನೆ ಮೊದಲಾದ ಕ್ಷೇತ್ರಗಳಲ್ಲಿ ಭಾರತವು ಮಹತ್ವದ ಸಾಧನೆಯನ್ನು ಮಾಡುತ್ತಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ಮೂಲಕ ದೇಶದ ಅಭಿವೃದ್ದಿಗೆ ನಾವೆಲ್ಲರೂ ಕೈಜೋಡಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಸಂಚಾಲಕರಾದ ಡಾ. ದಿಲೀಪ್ ಕುಮಾರ್ ಡಿ ಎಸ್, ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥ ಮೋಹನ್ ಡಿ, ಕಂಪ್ಯೂಟರ್‌ಸೈನ್ಸ್ ವಿಭಾಗದ ಮುಖ್ಯಸ್ಥರಾದ ರೂಪ ಡಿ.ಎಸ್, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ ಹೆಚ್ ಆರ್, ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಯಶಸ್ವಿತ ಚವ್ಹಾನ್, ಐಕ್ಯೂಎಸಿ ಸಂಚಾಲಕ ಪ್ರಶಾಂತ್ ಕುಮಾರ್, ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಾಧಿಕಾ ಎಮ್, ಶರ್ವಾಣಿ, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಮೂರೂ ವರ್ಷಗಳ ಬಿಎಸ್ಸಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಿಎಸ್ಸಿಯ ವಿದ್ಯಾರ್ಥಿಗಳು ತಾವು ತಯಾರಿಸಿದ ಒಟ್ಟು 33 ಮಾದರಿಗಳನ್ನು ಪ್ರದರ್ಶಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









