ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಪ್ರತಿಷ್ಠಿತ ಪಿಇಎಸ್ ಶಿಕ್ಷಣ ಸಂಸ್ಥೆಯ ವತಿಯಿಂದ ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 600 ಕ್ಕೆ 600 ಗಳನ್ನು ಪಡೆದ ಪಿಇಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪಿಇಎಸ್ ಟ್ರಸ್ಟ್ (ರಿ) ನ ಮುಖ್ಯ ಸಂಯೋಜನಾಧಿಕಾರಿ ಡಾ. ಆರ್. ನಾಗರಾಜ ಮಾತನಾಡಿ, “keeping together is progress, working together is success”. ಎಂಬ ಮಾತನ್ನು ಹೇಳುತ್ತಾ ಪದವಿ ಶಿಕ್ಷಣದ ಜೊತೆ- ಜೊತೆಗೆ ಸಿ ಎ, ಜೆಇಇ, ನೀಟ್, ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವವನ್ನು ತಿಳಿಸಿದರು.
ಪಿ ಇ ಎಸ್ ಐ ಟಿ ಎಮ್ ನ ಪ್ರಾಂಶುಪಾಲರಾದ ಡಾ. ಚೈತನ್ಯ ಕುಮಾರ್ ಮಾತನಾಡಿ, ವೃತ್ತಿಪರ ಕೋರ್ಸ್ ಗಳೊಂದಿಗೆ ಐ ಎ ಎಸ್, ಐ ಪಿ ಎಸ್ ನಂತಹ ಆಡಳಿತಾತ್ಮಕ ಕೋರ್ಸ್ ಗಳನ್ನು ತೆಗೆದುಕೊಳ್ಳುವ ಬಗ್ಗೆ ವಿದ್ಯಾರ್ಥಿಗಳ ಗಮನ ಸೆಳೆದರು.
ವಿಜ್ಞಾನ ವಿಭಾಗದಲ್ಲಿ 600 ಕ್ಕೆ 600 ಅಂಕ ಗಳಿಸಿದ ಡಿ. ತನುಶ್ರೀ, ವಿ. ವಿದ್ಯಾ ಹಾಗೂ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 600 ಅಂಕ ಗಳಿಸಿದ ಎಚ್. ಎಸ್. ರಮ್ಯಾ ಇವರುಗಳನ್ನು ಸನ್ಮಾನಿಸಲಾಯಿತು.
ಸನ್ಮಾನಿತರಾದ ವಿದ್ಯಾರ್ಥಿನಿಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಾ ತಮ್ಮ ಅತ್ಯುತ್ತಮ ಫಲಿತಾಂಶಕ್ಕೆ ಕಾರಣಕರ್ತರಾದ ಪೋಷಕರು, ಶಿಕ್ಷಕ ವೃಂದದವರು ಹಾಗೂ ತಮ್ಮ ಪ್ರತಿಭೆಯನ್ನು ಗುರುತಿಸಿ ಉಚಿತ ಶಿಕ್ಷಣಕ್ಕೆ ಅನುವು ಮಾಡಿಕೊಟ್ಟಂತಹ ಪಿಇಎಸ್ ಆಡಳಿತ ಮಂಡಳಿಗೆ ಧನ್ಯವಾದಗಳನ್ನು ತಿಳಿಸಿದರು. ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮದ ಜೊತೆಗೆ ಶಿಕ್ಷಕರ ಮಾರ್ಗದರ್ಶನ ಉತ್ತಮ ಫಲಿತಾಂಶವನ್ನು ಗಳಿಸುವಲ್ಲಿ ಸಹಾಯಕವಾಯಿತು ಎಂದು ಹೇಳಿದರು.
ಪಿಇಎಸ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಎಸ್. ರಂಗನಾಥಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳು ಕೇವಲ ಮಾರ್ಕ್ಸ್ ವಾದಿಗಳಾಗದೆ, ಲೈಫ್ ಸ್ಕಿಲ್ ಕಲೆಗಳನ್ನು ರೂಢಿಸಿಕೊಳ್ಳಲು ತಿಳಿಸಿದರು.
ಸನ್ಮಾನಿತರ ಪೋಷಕರು ಮತ್ತು ಕಾಲೇಜಿನ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪಿಇಎಸ್ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಭುವನೇಶ್ವರಿ ಸ್ವಾಗತಿಸಿದರು. ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಎಂ. ಯೋಗೆಶ್, ಪಿಇಎಸ್ ಪಬ್ಲಿಕ್ ಸ್ಕೂಲಿನ ಪ್ರಾಚಾರ್ಯರಾದ ಎಚ್. ಎಮ್. ಸೋಮಶೇಖರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಸುಪ್ರಿಯ ವಂದನಾರ್ಪಣೆ ಮಾಡಿದರು. ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮವನ್ನು ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post