ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶ ಸುತ್ತುವುದರಿಂದ ಹಾಗೂ ಕೋಶ ಓದುವುದರಿಂದ ನಮ್ಮಲ್ಲಿ ಜ್ಞಾನ, ಸಂವಹನ ಕಲೆ ವೃದ್ಧಿಸುವ ಜತೆಯಲ್ಲಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಬಸವಕೇಂದ್ರದ ಶ್ರೀ ಮರುಳಸಿದ್ಧ ಸ್ವಾಮೀಜಿ ಹೇಳಿದರು.
ಸರ್ಕಾರಿ ನೌಕರರ ಭವನದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ 2025ನೇ ಸಾಲಿನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿ, ಜೆಸಿಐನಂತಹ ಸಂಸ್ಥೆಗಳು ಯುವಜನರಲ್ಲಿ ಉತ್ತಮ ವ್ಯಕ್ತಿತ್ವ ನಿರ್ಮಿಸಿಕೊಳ್ಳಲು ತರಬೇತಿ ನೀಡುತ್ತಿವೆ. ಜೀವನದ ಮೌಲ್ಯಗಳು ಹಾಗೂ ಸಮಾಜಮುಖಿ ಕಾರ್ಯಗಳ ಜತೆ ನಾಯಕತ್ವ ಗುಣಗಳನ್ನು ಬೆಳೆಸುತ್ತಿವೆ.

ವಲಯ ಅಧ್ಯಕ್ಷ ಗೌರೀಶ್ ಭಾರ್ಗವ್ ಮಾತನಾಡಿ, ಜೆಸಿಐ ಸಂಸ್ಥೆಯು ನಿರಂತರವಾಗಿ ಸೇವಾ ಚಟುವಟಿಕೆಗಳನ್ನು ಮಾಡುತ್ತಿದ್ದು, ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಲು ತರಬೇತಿಗಳು, ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಮುಖ್ಯವಾಗಿ ಯುವಜನರಲ್ಲಿ ವ್ಯಕ್ತಿತ್ವ ಗುಣಗಳನ್ನು ಬೆಳೆಸಲು ತರಬೇತಿಗಳನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣಗಳನ್ನು ಬೆಳೆಸಲು ಸಹಕಾರಿಯಾಗುತ್ತಿದೆ ಎಂದರು.
Also read: ಮಂತ್ರಾಲಯ ವಿದ್ಯಾಪೀಠದ ವಾಹನ ಪಲ್ಟಿ | 3 ವಿದ್ಯಾರ್ಥಿಗಳು ಸೇರಿ ನಾಲ್ವರ ದುರ್ಮರಣ | ಶ್ರೀಗಳ ಕಂಬನಿ
ವಲಯ ಉಪಾಧ್ಯಕ್ಷ ಮಧುಸೂಧನ್ ನವಾಡ ಮಾತನಾಡಿ, ಜೆಸಿಐ ಸಂಸ್ಥೆಯು ಯುವಜನರಿಗೆ ಅನೇಕ ತರಬೇತಿಗಳನ್ನು ಶಾಲಾ-ಕಾಲೇಜುಗಳಲ್ಲಿ ಆಯೋಜಿಸಿ ವಿದ್ಯಾರ್ಥಿ ಜೀವನದೊಂದಿಗೆ ನಾಯಕತ್ವ ಗುಣಗಳನ್ನು ಬೆಳೆಸಲು ಬಹಳ ಸಹಕಾರಿಯಾಗಿರುತ್ತದೆ ಎಂದು ಹೇಳಿದರು.
ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿ.ಗಣೇಶ್ ಮಾತನಾಡಿ, ಈ ವರ್ಷ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಶಾಲಾ ಕಾಲೇಜುಗಳಲ್ಲಿ ಯುವಜನರಿಗೆ ವ್ಯಕ್ತಿತ್ವ ಗುಣಗಳನ್ನು ವೃದ್ಧಿಸಿ ನಾಯಕತ್ವ ಗುಣಗಳನ್ನು ಬೆಳೆಸಲು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಗ್ರಾಮಾಂತರ ಪ್ರದೇಶಗಳಲ್ಲಿ ಅನೇಕ ಸ್ವಚ್ಛತಾ ಕಾರ್ಯಕ್ರಮಗಳು, ಶಾಲೆಗಳ ಅಭಿವೃದ್ಧಿಪಡಿಸುವುದು ಸೇರಿದಂತೆ ಇನ್ನು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಜೆಸಿಐ ಶಿವಮೊಗ್ಗ ಸಹ್ಯಾದ್ರಿ ತಂಡದವರ ಸಹಕಾರ ಮುಖ್ಯ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post