ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛ ಮಾಡಿಸಿದ ಘಟನೆಗಳು ರಾಜ್ಯದಾದ್ಯಂತ ವಿವಾದ ಸೃಷ್ಠಿ ಮಾಡಿದ ಬೆನ್ನಲ್ಲೇ ಶಿಕ್ಷಣ ಸಚಿವರ ಜಿಲ್ಲೆಯಲ್ಲಿ ಮತ್ತೊಂದು ವಿವಾದಾತ್ಮಕ ಕೆಲಸ ಮಾಡಲಾಗಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಗ್ರಾಮದ ಉರ್ದು ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಹಂಚುಗಳನ್ನು ಸ್ವಚ್ಛ ಮಾಡಲು ವಿದ್ಯಾರ್ಥಿಗಳನ್ನು ಮೇಲಕ್ಕೆ ಹತ್ತಿಸಲಾಗಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಇಲ್ಲಿನ ಶಾಲೆಯಲ್ಲಿ ಮಕ್ಕಳು ಶಾಲೆಯ ಮೇಲ್ಚಾವಣಿ ಮೇಲೆ ಹತ್ತಿ ಕಸ ಗುಡಿಸಿದ್ದು, ಶಾಲೆಯ ಮುಖ್ಯ ಶಿಕ್ಷಕರು ಮಕ್ಕಳಿಂದ ಮಾಡಿಸಿದ ಕೆಲಸ ಸ್ಥಳೀಯರ ಮೊಬೈಲ್’ನಲ್ಲಿ ಸೆರೆಯಾಗಿದೆ.
Also read: ಯಾತ್ರಿಗಳು ಅಯೋಧ್ಯೆ ಮಾತ್ರವಲ್ಲ, ಮೆಕ್ಕಾ-ಮದೀನಕ್ಕೂ ತೆರಳುತ್ತಿರುತ್ತಾರೆ: ಪ್ರಹ್ಲಾದ ಜೋಶಿ
ಎರಡನೇ ತರಗತಿ ವಿದ್ಯಾರ್ಥಿ ಸೇರಿ ಕೆಲವು ಮಕ್ಕಳು ಕಸ ಗುಡಿಸಿ ಹಂಚು ಸರಿಪಡಿಸಿದ್ದಾರೆ ಎಂದು ವರದಿಯಾಗಿದೆ. ಇನ್ನು, ಘಟನೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಏನಾದರು ಅವಘಡ ಸಂಭವಿಸಿದರೆ ಹೊಣೆ ಯಾರು ಎಂದು ಪ್ರಶ್ನಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post