ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು #Suhas Shetty Murder Case ರಾಷ್ಟ್ರೀಯ ತನಿಖಾದಳವು ತನಿಖೆಗೆ ತೆಗೆದುಕೊಂಡಿರುವುದು ಅತ್ಯಂತ ಸ್ವಾಗತಾರ್ಹ ಎಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ತಿಳಿಸಿದೆ.
ಈ ಸಂಬಂಧ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಹೋರಾಟಕ್ಕೆ ಸಂದ ಜಯ ಇದು ಎಂದಿದ್ದಾರೆ.
ಇದನ್ನು ಸಮಸ್ತ ಹಿಂದೂಪರ ಸಂಘಟನೆಗಳ ಒಕ್ಕೂಟವಾದ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯು ಸ್ವಾಗತ ಮಾಡುತ್ತದೆ. ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯು ಈ ಪ್ರಕರಣದಲ್ಲಿ ರಾಜ್ಯವ್ಯಾಪಿ ಆಂದೋಲನ ಮಾಡಿ, ಈ ಹತ್ಯೆಯ ಹಿಂದೆ ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾ (ಪಿಎಫ್‍ಐ) ಸಂಘಟನೆಯ ಸದಸ್ಯರ ಕೈವಾಡವಿರುವ ಶಂಕೆಯಿದೆ. ಹಾಗಾಗಿ ಇದನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು. ಎಂಬ ಬೇಡಿಕೆಯನ್ನು ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಅಡಿಯಲ್ಲಿ ಎಲ್ಲ ಸಂಘಟನೆಗಳ ಜೊತೆಗೆ ಸೇರಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಶಿವಮೊಗ್ಗ, ಕಾರವಾರ ಮತ್ತು ವಿಜಯಪುರ ಮುಂತಾದ ಜಿಲ್ಲಾ ಕೇಂದ್ರಗಳಲ್ಲಿ ಆಂದೋಲನ ಮಾಡಿ, ಮನವಿಯನ್ನು ರಾಜ್ಯಪಾಲರಿಗೆ ಸಲ್ಲಿಸಿತ್ತು.
ಈಗ ರಾಷ್ಟ್ರೀಯ ತನಿಖಾ ದಳವು ಈ ಪ್ರಕರಣವನ್ನು ಕೈಗೆ ತೆಗೆದುಕೊಂಡಿರುವುದು ಅತ್ಯಂತ ಶ್ಲಾಘನೀಯ. ಇದು ಸಮಸ್ತ ಹಿಂದೂಪರ ಸಂಘಟನೆಗಳ ಸಂಘಟಿತ ಹೊರಾಟಕ್ಕೆ ಸಿಕ್ಕ ಮೊದಲ ವಿಜಯವಾಗಿದೆ. ರಾಷ್ಟ್ರೀಯ ತನಿಖಾ ದಳವು ಈ ಪ್ರಕರಣವನ್ನು ಗಂಭೀರವಾಗಿ ತನಿಖೆ ಮಾಡಿ, ಇದರ ಹಿಂದೆ ಇರುವ ಅಪರಾಧಿಗಳನ್ನು ಬಂಧನ ಮಾಡಿ ಸುಹಾಸ್ ಶೆಟ್ಟಿ ಹಂತಕರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕೆಂದು ಆಗ್ರಹ ಮಾಡುತ್ತದೆ. ಅದರಿಂದಲೇ ಕರಾವಳಿ ಜಿಲ್ಲೆಗಳಲ್ಲಿ ನಿಜವಾಗಿ ಕೋಮುಸೌಹಾರ್ದವು ಉಳಿಯುವುದು ಮತ್ತು ಹಿಂದೂ ನಾಯಕರ ರಕ್ಷಣೆಯಾಗುವುದು ಎಂಬ ಭರವಸೆ ಇದೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post